ಜ. 14: ಮರಕತದಲ್ಲಿ ಸತ್ಯನಾರಾಯಣ ಪೂಜೆ, ಧಾರ್ಮಿಕ ಉಪನ್ಯಾಸ

Advt_Headding_Middle
Advt_Headding_Middle

ಶ್ರೀ ದುರ್ಗಾ ಭಜನಾ ಮಂಡಳಿ ಮರಕತ, ನಡುಗಲ್ಲು ಇರದ ಆಶ್ರಯದಲ್ಲಿ 13 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನೆ, ಧಾರ್ಮಿಕ ಸಭೆ ಮತ್ತು ಸನ್ಮಾನ ಕಾರ್ಯಕ್ರಮ ಜ. 14 ರಂದು ನಡುಗಲ್ಲಿನ ಜವಾಹರ್ ಯುವಕ ಮಂಡಲದ ವಠಾರದಲ್ಲಿ ನಡೆಯಲಿದೆ.

ಅಂದು ಸಂಜೆ 5.00 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭಗೊಳ್ಳಲಿದೆ. ಸಂಜೆ 6.00. ಗಂಟೆಗೆ ಶ್ರೀ ದುರ್ಗಾ ಭಜನಾ ಮಂಡಳಿ ಮರಕತ, ನಡುಗಲ್ಲು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ 7.30 ಕ್ಕೆ ಮಂಗಳಾರತಿ ಬಳಿಕ ರಾತ್ರಿ 8.30 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಮಂಡಳಿ ಅಧ್ಯಕ್ಷ ಪ್ರಭಾಕರ ಪಡ್ರೆ ವಹಿಸಲಿದ್ದಾರೆ. ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಾಣಿಲ ಇವರು ಆಶೀರ್ವಚನ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲು ಭಾಗವಹಿಸಲಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿದ ಊರಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮವಾಗಿ ರಾತ್ರಿ 9.00 ಗಂಟೆಗೆ ದಿವ್ಯ ಭಟ್ ಪೆರುವೋಡಿ ಕುಂಬ್ಳೆ ಇವರಿಂದ ಶಿಬಿ ಚಕ್ರವರ್ತಿಯ ಕತೆ ಬಳಿಕ ಭೂಮಿ ಕ್ರಿಯೇಷನ್ಸ್ ಮಂಗಳೂರು ಇವರಿಂದ ಕಲಾ ಪ್ರಕಾರಗಳು ಕಲೋತ್ಸವ ನಡೆಯಲಿದೆ.

ಝೀ ಕನ್ನಡ ಡ್ರಾಮಾ ಜೂನಿಯರ್ ಸೀಸನ್ 2 ವಿನ್ನರ್ ಜೂನಿಯರ್ ಲಕ್ಷ್ಮೀ ಖ್ಯಾತಿಯ ವಂಶಿ ರತ್ನಕುಮಾರ್ ಭಾಗವಹಿಸಲಿದ್ದಾರೆ ಎಂದು ಶ್ರೀ ದುರ್ಗಾ ಭಜನಾ ಮಂಡಳಿ ಅಧ್ಯಕ್ಷ ಪ್ರಭಾಕರ ಪಡ್ರೆ, ಕಾರ್ಯದರ್ಶಿ ಧರ್ಮಪಾಲ ಡಿ. ಚಾರ್ಮತ ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.