ಪೆರಾಜೆ : ಗೇರು ಕಾಳುಮೆಣಸು ಮತ್ತು ತೆಂಗು ಬೇಸಾಯದ ಬಗ್ಗೆ ತರಬೇತಿ ಕಾರ್ಯಕ್ರಮ ಮತ್ತು ವಿಚಾರ ಸಂಕೀರ್ಣ

Advt_Headding_Middle
Advt_Headding_Middle

ತೋಟಗಾರಿಕೆ ಇಲಾಖೆ ಜಿಲ್ಲಾ ಪಂಚಾಯಿತಿ ಮಡಿಕೇರಿ ಮತ್ತು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಜಂಟಿ ಆಶ್ರಯದಲ್ಲಿ 2019-20 ನೇ ಸಾಲಿನ ರಾಜ್ಯ ವಲಯ ಯೋಜನೆಯಡಿ ಗೇರು ಕಾಳುಮೆಣಸು ಮತ್ತು ತೆಂಗು ಬೇಸಾಯದ ಬಗ್ಗೆ ತರಬೇತಿ ಕಾರ್ಯಕ್ರಮ ಮತ್ತು ವಿಚಾರ ಸಂಕಿರ್ಣ ಇಂದು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಕಾರ ಸದನದಲ್ಲಿ ನಡೆಯಿತು.

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ ಧರಣೀಧರ ಉದ್ಘಾಟಿಸಿದರು. ಮಡಿಕೇರಿ ತೋಟಗಾರಿಕಾ ಉಪನಿರ್ದೇಶಕ ಚಂದ್ರಶೇಖರ್ ಕೆ.ಎಸ್. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಪುತ್ತೂರು ಗೇರು ಸಂಶೋಧನಾ ನಿರ್ದೇಶನಾಲಯದ ನಿವೃತ್ತ ಪ್ರಧಾನ ವಿಜ್ಞಾನಿ ಡಾ. ಯದುಕುಮಾರ್ ಎನ್ ಅವರು ಗೇರು ಮತ್ತು ಕಾಳುಮೆಣಸು ಬೇಸಾಯದ ಬಗ್ಗೆ ತಾಂತ್ರಿಕ ಮಾಹಿತಿ, ದ.ಕ. ಕಿದು ನೆಟ್ಟಣದ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆಯ ತಾಂತ್ರಿಕ ಅಧಿಕಾರಿ ಗೋಪಾಲಕೃಷ್ಣ ಎ.ಎಸ್. ತೆಂಗು ಬೆಳೆಯ ಸಮಗ್ರ ಮಾಹಿತಿ, ಮಡಿಕೇರಿ ತೋಟಗಾರಿಕಾ ಇಲಾಖೆಯ ತಜ್ಞ ಬಿ.ಸಿ. ನಾಚಪ್ಪ ತೋಟಗಾರಿಕಾ ಬೆಳೆಗಳಲ್ಲಿ ಸಾವಯವ ಕೃಷಿ ಬಗ್ಗೆ ತಾಂತ್ರಿಕ ಮಾಹಿತಿಗಳನ್ನು ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.