HomePage_Banner
HomePage_Banner
Breaking News

ಪುತ್ತೂರು ಸುದ್ದಿ ಸೌಹಾರ್ದ ಸಹಕಾರಿ ಸಂಘ ಪುತ್ತೂರು ತಾ.ಪಂ. ಸಂಕೀರ್ಣಕ್ಕೆ ಸ್ಥಳಾಂತರಗೊಂಡು ಶುಭಾರಂಭ

ಪುತ್ತೂರು ಮುಖ್ಯ ರಸ್ತೆಯ ಏಳ್ಮುಡಿಯ ಡೇನಿಯಲ್ ಆರ್ಕೆಡ್‌ನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸುದ್ದಿ ಸೌಹಾರ್ದ ಸಹಕಾರಿ ಸಂಘವು ಜ.18 ರಂದು ಪುತ್ತೂರು ತಾಲೂಕು ಪಂಚಾಯತ್ ಸಂಕೀರ್ಣಕ್ಕೆ ಸ್ಥಳಾಂತರಗೊಂಡು ಶುಭಾರಂಭಗೊಂಡಿತು.

ಕಚೇರಿಯನ್ನು ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ ಕೆ.ರಾಧಾಕೃಷ್ಣ ಬೋರ್ಕರ್ ಮತ್ತು ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವರು ಉದ್ಘಾಟಿಸಿದರು.

ಸಭಾ ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾ ಭವನದಲ್ಲಿ ನಡೆಯಿತು. ಪುತ್ತೂರಿನ ಮಾಜಿ ಶಾಸಕಿ ಶ್ರೀ ಮತಿ ಶಕುಂತಲಾ ಶೆಟ್ಟಿ ದೀಪ ಬೆಳಗಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.

ಸುದ್ದಿ ಸಹಕಾರಿ ಸಂಘದ ಅಧ್ಯಕ್ಷರು, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ. ಯು.ಪಿ. ಶಿವಾನಂದರು ಅಧ್ಯಕ್ಷತೆ ವಹಿಸಿದರು.ಹಲವಾರು ಗಣ್ಯರು, ನಿರ್ದೇಶಕರು ವೇದಿಕೆ ಯಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.