Breaking News

ಡಿಜಿಟಲ್ ಕ್ರೌರ್ಯಕ್ಕೆ ಸಾಹಿತ್ಯದಲ್ಲಿ ಉತ್ತರ

Advt_Headding_Middle
Advt_Headding_Middle

 

ಎಲಿಮಲೆ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಜೋಗಿ ಅಭಿಮತ

ಸಮಾಜದಲ್ಲಿ ನಡೆಯುತ್ತಿರುವ ಡಿಜಿಟಲ್ ಕ್ರೌರ್ಯಗಳಿಗೆ ಸಾಹಿತ್ಯದಲ್ಲಿ ಉತ್ತರವಿದೆ .‌ ಸಾಹಿತ್ಯ ಒಂದು ಸಾಂತ್ವಾನ ಮಾರ್ಗವೂ ಹೌದು ಎಂದು ಖ್ಯಾತ ಸಾಹಿತಿ, ಕನ್ನಡ ಪ್ರಭ ಪತ್ರಿಕೆಯ ಪುರವಣಿ ಸಂಪಾದಕ ಗಿರೀಶ್ ರಾವ್ ಹತ್ವಾರ್ (ಜೋಗಿ) ಹೇಳಿದ್ದಾರೆ.

ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸಮ್ಮೇಳನ ಸ್ವಾಗತ ಸಮಿತಿ, ಎಲಿಮಲೆ ಸರಕಾರಿ ಪ್ರೌಢ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಎಲಿಮಲೆ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೆಸರಾಂತ ಸಾಹಿತಿ ಕೃ.ಶಾ.ಮರ್ಕಂಜ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಿತು.

ಶಾಸಕ ಎಸ್.ಅಂಗಾರ ಸ್ಮರಣ ಸಂಚಿಕೆ ಅನಾವರಣ ಮಾಡಿದರು. ಜಿ.ಪಂ. ಸದಸ್ಯೆ ಆಶಾ ತಿಮ್ಮಪ್ಪ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಪೂರ್ವಾಧ್ಯಕ್ಷ ನಿತ್ಯಾನಂದ ಮುಂಡೋಡಿ ಅತಿಥಿಗಳಾಗಿ ಪಾಲ್ಗೊಂಡರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ಲಲಿತಾಜ ಮಲ್ಲಾರ ಅನಿಸಿಕೆ ವ್ಯಕ್ತಪಡಿಸಿದರು.

 

ಪುಸ್ತಕ ಮತ್ತು ವಸ್ತು ಪ್ರದರ್ಶನ ಉದ್ಘಾಟಿಸಿದ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಮರವಣಿಗೆ ಉದ್ಘಾಟಿಸಿದ ತಾಲೂಕು ಪಂಚಾಯತ್ ಸದಸ್ಯ ಶ್ರೀಮತಿ ಯಶೋದಾ ಬಾಳೆಗುಡ್ಡೆ, ಧ್ವಜಾರೋಹಣಗೈದ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮುಂಡೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಎ.ವಿ.ತೀರ್ಥರಾಮ ಸ್ವಾಗತಿಸಿದರು. ಸುಳ್ಯ ತಾಲೂಕು‌ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ ಪ್ರಸ್ತಾವನೆಗೈದರು. ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಆಶಯ ನುಡಿಗಳನ್ನಾಡಿದರು. ಸುಳ್ಯ ತಾಲೂಕು ಕ.ಸಾ.ಪ. ಗೌರವ ಕಾರ್ಯದರ್ಶಿ ಚಂದ್ರಶೇಖರ ಪೇರಾಲು ಸ್ಮರಣ ಸಂಚಿಕೆ ಸಂಪಾದಕ ನುಡಿಗಳನ್ನಾಡಿದರು. ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಮೆತ್ತಡ್ಕ‌ ಸಮ್ಮೇಳನಾಧ್ಯಕ್ಷರನ್ನು ಪರಿಚಯಿಸಿದರು. ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ವಂದಿಸಿದರು. ಉಪನ್ಯಾಸಕಿ‌ ಬೇಬಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.

ಸ್ವಾಗತ ಸಮಿತಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಕ.ಸಾ.ಪ. ಗೌರವ ಕೋಶಾಧಿಕಾರಿ ದಯಾನಂದ ಆಳ್ವ , ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಗುಡ್ಡೆಮನೆ, ಕಾರ್ಯದರ್ಶಿ ಜಯಂತ ತಳೂರು , ಜಿಲ್ಲಾ ಕ.ಸಾ.ಪ ವಕ್ತಾರ ನಿತ್ಯಾನಂದ ಕಾರಂತ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.