ಅಯ್ಯನಕಟ್ಟೆ ಜಾತ್ರೆ: ಜಾತ್ರಾ ಪೂರ್ವಭಾವಿ ಸಭೆ

Advt_Headding_Middle
Advt_Headding_Middle

 

ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆಯ ಶ್ರೀ ಇಷ್ಟದೇವತಾ ಉಳ್ಳಾಕುಲು ದೇವಸ್ಥಾನದ ಬ್ರಹ್ಮ ಕಲಶೋತ್ಸವವು ಜ. 25 ರಿಂದ 27 ರ ತನಕ ಮತ್ತು ಅಯ್ಯನಕಟ್ಟೆ ಜಾತ್ರೆಯು ಜ. 27 ರಿಂದ ಜ. 30 ರ ತನಕ ನಡೆಯಲಿದ್ದು, ಈ ಬಗ್ಗೆ ಕೊನೆಯ ಪೂರ್ವಭಾವಿ ಸಭೆಯು ಜ. 20 ರಂದು ಶ್ರೀ ಇಷ್ಟದೇವತಾ ಉಳ್ಳಾಕುಲು ಕ್ಷೇತ್ರ ಮೂರುಕಲ್ಲಡ್ಕದಲ್ಲಿ ನಡೆಯಿತು.

ಉಳ್ಳಾಕುಲು ಸೇವಾಸಮಿತಿಯ ಗೌರವಾಧ್ಯಕ್ಷ ಬಾಳಿಲ ಸುಬ್ರಾಯ ಅಡಿಕೆಹಿತ್ಲು, ಅಧ್ಯಕ್ಷ ಲಕ್ಷ್ಮಣ ಗೌಡ ಬೇರಿಕೆ, ಬ್ರಹ್ಮ ಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್. ವಿಶ್ವನಾಥ ರೈ, ಅಧ್ಯಕ್ಷ ಮಾಧವ ಗೌಡ ಕುಯಿಂತೋಡು, ಆಡಳಿತ ಸಮಿತಿ ವಿಶ್ವಸ್ಥರಾದ ಲಿಂಗಪ್ಪ ಗೌಡ ಟಿ, ಜಗನ್ನಾಥ ರೈ ಕಳಂಜಗುತ್ತು, ಬ್ರಹ್ಮ ಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮೂರು ಸಮಿತಿಗಳ ಪ್ರಧಾನ ಕಾರ್ಯದರ್ಶಿ ಪಿ.ಜಿ.ಎಸ್.ಎನ್. ಪ್ರಸಾದ್ ಸಭೆಯನ್ನು ನಡೆಸಿಕೊಟ್ಟರು. ಎಲ್ಲಾ ಸಮಿತಿಗಳ ಸಂಚಾಲಕರು, ಸದಸ್ಯರು, ಭಕ್ತವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಜಾತ್ರೋತ್ಸವ ಸುಸೂತ್ರವಾಗಿ ನಡೆಸುವ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಎಲ್ಲಾ ಸಮಿತಿಗಳ ಪದಾಧಿಕಾರಿಗಳು, ಸಂಚಾಲಕರು, ಭಕ್ತವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.