ಫೆ.08 ರಿಂದ ಫೆ 10 : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Advt_Headding_Middle
Advt_Headding_Middle

 

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.08 ರಿಂದ ಫೆ.10 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಫೆ 02 ರಂದು ಗೊನೆ ಕಡಿಯಲಾಗುವುದು.
ಫೆ 08 ರಂದು ಬೆಳಿಗ್ಗೆ ,8.30 ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ,ಗಂಟೆ 10.00 ಕ್ಕೆ ಉಗ್ರಾಣ ತುಂಬುವುದು.ಗಂಟೆ 12.00 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.ರಾತ್ರಿ ಗಂಟೆ 6.30 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಗಂಟೆ 8.30 ರಿಂದ ರಂಗಪೂಜೆಗಳು ನಡೆಯಲಿದೆ.
ಫೆ.09 ರಂದು ಬೆಳಿಗ್ಗೆ ಗಂಟೆ 9.00 ರಿಂದ ಶತರುದ್ರಾಭಿಷೇಕ,ಅಶ್ವಥ್ಥನಾರಾಯಣ ಪೂಜೆ,108 ಕಾಯಿ ಗಣಪತಿ ಹೋಮ ನಡೆಯಲಿದೆ.
ಪೂರ್ವಾಹ್ನ ಗಂಟೆ 10.30 ರಿಂದ ಭಜನೆ,ನಂತರ ಕಲಶಾಭಿಷೇಕಗಳು ನಡೆಯಲಿದೆ.
ಪೂರ್ವಾಹ್ನ ಗಂಟೆ 12.30 ರಿಂದ ಮಹಾಪೂಜೆ,ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ 6.30 ರಿಂದ ಸ.ಕಿ
ಪ್ರಾ.ಶಾಲೆ ದೇರಾಜೆ ಮತ್ತು ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ರಾತ್ರಿ ಗಂಟೆ 7
.00 ಕ್ಕೆ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ನಡೆಯಲಿದೆ.ರಾತ್ರಿ ಗಂಟೆ 8.30 ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆಯಲಿದೆ.
ಫೆ.10 ರಂದು ಪೂರ್ವಾಹ್ನ ಗಂಟೆ 8.30 ಕ್ಕೆ ಕೊಯಿಲ ಉಳ್ಳಾಕುಲು ದೈವಗಳ ಭಂಡಾರ ಬರುವುದು.ಪೂರ್ವಾಹ್ನ ಗಂಟೆ 9.30 ರಿಂದ ದರ್ಶನ ಬಲಿ ,ಬಟ್ಟಲು ಕಾಣಿಕೆ,ಶುದ್ಧಿ ಕಲಶ ನಡೆಯಲಿದೆ.
ಪೂರ್ವಾಹ್ನ ಗಂಟೆ 12.30 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.
ರಾತ್ರಿ ಗಂಟೆ 7.30 ರಿಂದ ಯಕ್ಷಸಿರಿ ಕಲಾವೇದಿಕೆ ಖಂಡಿಗೆಮೂಲೆ ಇದರ ಮಕ್ಕಳಿಂದ ” ಮಹಿಷಾಸುರ ಮರ್ಧಿನಿ” ಯಕ್ಷಗಾನ ಬಯಲಾಟ ನಡೆಯಲಿದೆ.
ರಾತ್ರಿ ಗಂಟೆ 10.00 ರಿಂದ ದೈವಗಳ ನಡಾವಳಿ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.