HomePage_Banner
HomePage_Banner

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಅವರಿಂದ ರಸ್ತೆ ಕಾಮಗಾರಿ ಪರಿಶೀಲನೆ

ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ನಡೆಯುತ್ತಿರುವ ಬಹುಕೋಟಿ ವೆಚ್ಚದ ಮಾಸ್ಟರ್ ಪ್ಲಾನ್ ಯೋಜನೆಯ ರಸ್ತೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆಯನ್ನು ಎಡಿಸಿ ರೂಪಾ ಎಂ.ಜೆ. ಜ. 21 ನಡೆಸಿದರು.
ಸುಬ್ರಹ್ಮಣ್ಯದ ಕುಮಾರಧಾರ ಧ್ವಾರದ ಬಳಿಯಿಂದ ಚಥುಷ್ಪಥ ರಸ್ತೆ ಕಾಂಕ್ರಿಟೀಕರಣ ನಡೆಯುತ್ತಿದ್ದು, ದ.ಕ. ಅಪರ ಜಿಲ್ಲಾಧಿಕಾರಿ ರೂಪಾ ಎಂ.ಜೆ. ಸಂಬಂಧಪಟ್ಟ ಇಲಾಖೆಗಳ ನೇತೃತ್ವದಲ್ಲಿ ಅಭಿವೃದ್ಧಿ ಗುಣಮಟ್ಟ ಪರಿಶೀಲನೆ ನಡೆಸಿದರು. ರಸ್ತೆಯ ಸುಮಾರು 50ಮೀಟರ್ ಅಂತರದಲ್ಲಿ ಕಾಂಕ್ರೀಟ್ ರಸ್ತೆಯನ್ನು ಯಂತ್ರದ ಸಹಾಯದಿಂದ ಕೊರೆದು ಪರಿಶೀಲನೆ ನಡೆಸಿ, ಗುಣಮಟ್ಟದ ಬಗ್ಗೆ ಇಂಜಿನೀಯರ್ ಅವರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ದೇವಳದ ಅಭಿಯಂತರ ಉದಯ ಕುಮಾರ್, ಪಿಡಬ್ಯ್ಲೂಡಿ ಇಂಜಿನೀಯರ್ ಶ್ರೀನಾಥ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.