ಸುಳ್ಯದಲ್ಲಿ ಗಣರಾಜ್ಯೋತ್ಸವ ಆಚರಣೆ

Advt_Headding_Middle
Advt_Headding_Middle

ಆಕರ್ಷಕ ಪಥಸಂಚಲನ, ಗೌರವ ವಂದನೆ ಸ್ವೀಕಾರ

ಸಂವಿಧಾನ ಜಗತ್ತಿನ ಶ್ರೇಷ್ಠ ಮೌಲ್ಯ : ತಹಶೀಲ್ದಾರ್

ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ ಆಶ್ರಯದಲ್ಲಿ ಗಣರಾಜ್ಯೋತ್ಸವವನ್ನು ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಆಚರಿಸಲಾಯಿತು.

ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹ್ಮದ್ ಧ್ವಜಾರೋಹಣಗೈದು, ಗೌರವ ವಂದನೆ ಸ್ವೀಕರಿಸಿದರು. ಆಕರ್ಷಕ ಪಥಸಂಚಲನ ನಡೆಯಿತು.
ಗಣರಾಜ್ಯೋತ್ಸವ ಸಂದೇಶ ನೀಡಿದ ತಹಶೀಲ್ದಾರ್ ಎನ್.ಎ. ಕುಂಞಿ ಅಹ್ಮದ್‌ರವರು ನಮ್ಮ ಸಂವಿಧಾನ ಜಗತ್ತಿನ ಅತ್ಯಂತ ಶ್ರೇಷ್ಠ ಮೌಲ್ಯಗಳನ್ನು ಒಳಗೊಂಡದ್ದಾಗಿದೆ. ದೇಶದಲ್ಲಿ ಹುಟ್ಟಿದ ಎಲ್ಲರೂ ಪರಸ್ಪರ ಪ್ರೀತಿಯಿಂದ, ಗೌರವದಿಂದ, ಸಹಕಾರದಿಂದ, ಸಹಬಾಳ್ವೆಯಿಂದ ಬದುಕುವ ಅಗತ್ಯವಿದೆ. ನಮ್ಮ ಸಂವಿಧಾನದ ಆಶಯ ಮತ್ತು ಬದುಕು ಅದೇ ಆಗಿದೆ ಎಂದು ಹೇಳಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಸ್.ಅಂಗಾರ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.