ಸ್ನೇಹ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Advt_Headding_Middle
Advt_Headding_Middle


 ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ 71ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಸಂಚಾಲಕರಾದ ಡಾ. ವಿದ್ಯಾಶಾಂಭವ ಪಾರೆಯವರು ಧ್ವಜಾರೋಹಣಗೈದು ಸಂವಿಧಾನದ ಮಹತ್ವ ಹಾಗೂ ನಾವೆಲ್ಲರೂ ದೇಶದ ಪ್ರಗತಿಯ ಬಗ್ಗೆ ಚಿಂತನೆ ನಡೆಸಬೇಕು ಎಂದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಅಧ್ಯಕ್ಷರಾದ ಡಾ ಚಂದ್ರಶೇಖರ ದಾಮ್ಲೆಯವರು ಶುಭಹಾರೈಸಿದರು. ಸಂಸ್ಥೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಅವರು ಎಲ್ಲರನ್ನು ಸ್ವಾಗತಿಸಿದರು. ಶಿಕ್ಷಕ ದೇವಿಪ್ರಸಾದ ಜಿ ಸಿ ವಂದಿಸಿದರು. ಧ್ವಜಾರೋಹಣದ ಮೊದಲು ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಿತು. ಈ ಸಂದರ್ಭದಲ್ಲಿ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಧ್ವಜಾರೋಹಣ ಕಾರ್ಯಕ್ರಮದ ಬಳಿಕ ಸಾಮಾಜಿಕ ಜಾಗೃತಿಯಡಿ ಶ್ರೀಯುತ ಶ್ರೀ ಪಡ್ರೆಯವರೊಂದಿಗೆ ‘ ಜೀವ ಜಲದ ಉಳಿವು ಪಯಸ್ವಿನಿ ಯಲ್ಲಿ ನೀರಿನ ನಿರಂತರ ಹರಿವು’ ವಿಷಯದ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.