Breaking News

ಸವೇರಪುರ ಆಂಗ್ಲಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Advt_Headding_Middle
Advt_Headding_Middle

ಸವೇರಪುರ ಆಂಗ್ಲಮಾಧ್ಯಮ ಶಾಲೆಯಲ್ಲಿ ೭೧ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಶಾಲಾ ಸಂಚಾಲಕರಾದ ಫಾ| ನವೀನ್ ಪ್ರಕಾಶ್ ಪಿಂಟೋರವರು ಧ್ವಜಾರೋಹಣಗೈದರು ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾದ ಕಿಶೋರ್ ಕುಮಾರ್ ಪಿ ಬಿ.ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಶಾಲಾ ಸಂಚಾಲಕರು ಕಾರ್ಯಕ್ರಮದ ಅಧ್ಷಕ್ಷತೆ ವಹಿಸಿ, ಸಂವಿಧಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಅದೇ ದಿನ ಲಯನ್ಸ್ ಕ್ಲಬ್ ಸಂಪಾಜೆ ಹಾಗೂ ಶಾಲಾ ಶಿಕ್ಷಕ-ರಕ್ಷಕ ಸಂಘವು ದಾನವಾಗಿ ನೀಡಿದ ತಂಪು ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ -ರಕ್ಷಕ ಸಂಘದ ಸರ್ವಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿನಿ ಕು. ಆಯಿಷತ್ ತಸ್ಮಿಯಾ ಕಾರ್ಯಕ್ರಮ ನಿರೂಪಿಸಿ, ಸೂರ್ಯ ಪ್ರಕಾಶ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.