ಶ್ರೀ ಕ್ಷೇತ್ರ ಗೆಜ್ಜೆ ಗಿರಿ ನಂದನ ಬಿತ್ತ್ ಲ್ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Advt_Headding_Middle
Advt_Headding_Middle

 


ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆ ಗಿರಿ ನಂದನ ಬಿತ್ತ್ ಲ್ ಕ್ಷೇತ್ರದಲ್ಲಿ ಫೆ.24 ರಿಂದ ಮಾ.2 ರವರೆಗೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಗೆಜ್ಜೆ ಗಿರಿ ಮೂಲಸ್ಥಾನ ಗರಡಿ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಜ.29 ರಂದು ಸುಳ್ಯ ಶ್ರೀ ಕಲ್ಕುಡ ದೈವಸ್ಥಾನದ ವಠಾರದಲ್ಲಿ ಬಿಡುಗಡೆ ಮಾಡಲಾಯಿತು.


ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ ರವರು ಬಿಡುಗಡೆಗೊಳಿಸಿ ಶುಭಹಾರೈಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಂತ ನಡುಬೈಲು ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರದ ಯಜಮಾನರಾದ ಶ್ರೀಧರ ಪೂಜಾರಿ,ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ನ.ಪಂ.ಸದಸ್ಯೆ ಶ್ರೀಮತಿ ಶಶಿಕಲಾ ನೀರಬಿದಿರೆ, ಉದ್ಯಮಿ ಎಂ.ಬಿ.ಸದಾಶಿವ ಸುಳ್ಯ, ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ ಮಡ್ಯಂಗಳ, ಕಾರ್ಯದರ್ಶಿ ಸುಧಾಕರ ಸುವರ್ಣ, ಬಿಲ್ಲವ ಸಂಘದ ಅಧ್ಯಕ್ಷ ವಿಠಲದಾಸ್ ಎನ್.ಎಸ್, ಯುವ ವಾಹಿನಿ ಘಟಕದ ಅಧ್ಯಕ್ಷ ಪ್ರವೀಣ್ ನೆಟ್ಟಾರು, ಶೇಣಿ ಗರಡಿ ಅನುವಂಶಿಕ ಆಡಳ್ತೆದಾರ ಬಿ.ಕೆ.ಧರ್ಮಪಾಲ ಶೇಣಿ ಉಪಸ್ಥಿತರಿದ್ದರು. ಯುವ ವಾಹಿನಿ ಮಾಜಿ ಅಧ್ಯಕ್ಷ ಶಿವಪ್ರಸಾದ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು .ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ, ಸಮಿತಿ ಸದಸ್ಯರಾದ ಶಶಿಧರ ಪೂಜಾರಿ ಪರಿವಾರಕಾನ, ಭರತ್ ಪೂಜಾರಿ ಹಾಗೂ ಉಪ ಸಮಿತಿ ಸಂಚಾಲಕರು ಮತ್ತು ಸದಸ್ಯರು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.