Breaking News

ಜಾಲ್ಸೂರು : ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದಲ್ಲಿ 8ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಸಂಭ್ರಮ

Advt_Headding_Middle
Advt_Headding_Middle

 

ಜಾಲ್ಸೂರು : ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದಲ್ಲಿ 8ನೇ ವರ
ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದಲ್ಲಿ 8ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಜ.29ರಂದು ಜರುಗಿತು.
ಬೆಳಿಗ್ಗೆ 12 ತೆಂಗಿನಕಾಯಿ ಗಣಪತಿ ಹವನ, ನಾಗಸಾನಿಧ್ಯದಲ್ಲಿ ನಾಗತಂಬಿಲ, ಪಾದುಕಾಪೂಜೆ, ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರುಗಿತು.
ಸಂಜೆ ನಾಗಸಾನಿಧ್ಯದಲ್ಲಿ ಆಶ್ಲೇಷ ಬಲಿ,ಅಲಂಕಾರ ಪೂಜೆ ನಡೆಯಿತು. ಸಾಂಸ್ಕೃತಿಕ ಕಲಾವೇದಿಕೆಯಲ್ಲಿ ಜಾಲ್ಸೂರಿನ ಕಲಾಕೇಸರಿ ನೃತ್ಯ ತಂಡದಿಂದ ನೃತ್ಯಾರ್ಪಣಾ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ರಾತ್ರಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಂದಿರದ ಅಧ್ಯಕ್ಷ ಎಸ್.ಬಾಬು ಪಾಟಾಳಿ ಅಧ್ಯಕ್ಷತೆ ವಹಿಸಿದ್ದರು. ಭಜರಂಗದಳದ ಪ್ರಾಂತ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಭಜನಾ ಮಂದಿರದ ರಂಗಮಂದಿರ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಟ್ಟ ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ ಅವರನ್ನು ಬ್ರಹ್ಮಶ್ರೀ ವೇ.ಮೂ. ಪುರೋಹಿತ ನಾಗರಾಜ ಭಟ್ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಭಜನಾ ಮಂದಿರದ ಅರ್ಚಕ ರಾಮಕೃಷ್ಣ ಭಟ್, ಸಾ.ಶ್ರೀ. ಗಣೇಶೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಬೇರ್ಪಡ್ಕ, ಮಂದಿರದ ಪ್ರ.ಕಾರ್ಯದರ್ಶಿ ಮೋಹನ ಜಾಲ್ಸೂರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.