ರಾಷ್ಟ್ರೀಯ ಯುವಜನೋತ್ಸವದಲ್ಲಿ ಕೆವಿಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿ ಭಾಗಿ

Advt_Headding_Middle
Advt_Headding_Middle

ಭಾರತದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು 23ನೇ ರಾಷ್ಟ್ರೀಯ ಯುವಜನೋತ್ಸವವನ್ನು ಜ.12 ರಿಂದ 16ರ ತನಕ ಉತ್ತರಪ್ರದೇಶದ ಲಕ್ನೋದಲ್ಲಿ ಆಯೋಜಿಸಿತ್ತು.
ಕಾರ್‍ಯಕ್ರಮದಲ್ಲಿ ಕರ್ನಾಟಕ ರಾಜ್ಯದಿಂದ 25 ಎನ್.ಎಸ್.ಎಸ್ ವಿದ್ಯಾರ್ಥಿಗಳು ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯ, ಕರ್ನಾಟಕ, ಬೆಂಗಳೂರಿನಿಂದ ಪ್ರತಿನಿಧಿಸಿದ್ದರು. ಅದರಲ್ಲಿ ಕೆ.ವಿ.ಜಿ. ಆಯುರ್ವೇದ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದಿಂದ ಆಯ್ಕೆಯಾದ ಅಂತಿಮ ವರ್ಷದ ಬಿ.ಎ.ಎಂ.ಎಸ್. ವಿದ್ಯಾರ್ಥಿ ಬಸವರಾಜ್ ಬಿರಾದರ್ ಸಕ್ರೀಯವಾಗಿ ಪಾಲ್ಗೊಂಡು ಕಾಲೇಜನ್ನು ಪ್ರತಿನಿಧಿಸಿರುತ್ತಾರೆ. ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಕೋಶಾಧಿಕಾರಿ ಶ್ರೀಮತಿ. ಶೋಭ ಚಿದಾನಂದ, ನಿರ್ದೇಶಕರಾದ ಮಿ. ಅಕ್ಷಯ್ ಕೆ.ಸಿ., ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲ ಡಾ.ಎನ್.ಎಸ್.ಶೆಟ್ಟರ್, ಆಡಳಿತಾಧಿಕಾರಿ ಡಾ.ಲೀಲಾಧರ್ ಡಿ.ವಿ., ಎನ್.ಎಸ್.ಎಸ್. ಘಟಕಾಧಿಕಾರಿ ಡಾ.ಪ್ರಮೋದ್ ಪಿ.ಎ. ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ವರ್ಗದವರು ಅಭಿನಂದಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.