ಬೆಳ್ಳಾರೆ ಕಾಲೇಜಿನಲ್ಲಿ “ಪ್ರಜಾಪ್ರಭುತ್ವದ ನೆಲೆಯಲ್ಲಿ ಅಲ್ಪಸಂಖ್ಯಾತರ ಹಕ್ಕುಗಳು” ಉಪನ್ಯಾಸ ಕಾರ್ಯಕ್ರಮ

Advt_Headding_Middle
Advt_Headding_Middle

 

ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬೆಳ್ಳಾರೆ ಇಲ್ಲಿನ ಅಲ್ಪಸಂಖ್ಯಾತರ ವೇದಿಕೆ ಮತ್ತು ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ “ಪ್ರಜಾಪ್ರಭುತ್ವದ ನೆಲೆಯಲ್ಲಿ ಅಲ್ಪಸಂಖ್ಯಾತರ ಹಕ್ಕುಗಳು” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಮಠತ್ತಡ್ಕ ಕೇಶವ ಭಟ್ ಸಭಾಭವನ ದಲ್ಲಿ ನಡೆಯಿತು.


ಕಾಲೇಜಿನ ಅಲ್ಪಸಂಖ್ಯಾತರ ವೇದಿಕೆಯ ಸಂಯೋಜಕರು ಹಾಗು ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ.ಸುಪ್ರಿಯಾ ಪಿ.ಆರ್ ಪ್ರಸ್ತಾವನೆಗೈದರು .
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದ ಪುತ್ತೂರು ಸರಕಾರಿ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಶ್ರೀ ಐವನ್ ಫ್ರಾನ್ಸಿಸ್ ಲೋಬೋ ಮಾತನಾಡಿ ಸಂವಿಧಾನವನ್ನು ಸರಿಯಾಗಿ ಅರಿತುಕೊಂಡು, ವ್ಯಕ್ತಿಗಳು ಮತ್ತು ಸಮುದಾಯಗಳನ್ನು ಸಮರ್ಪಕವಾಗಿ ಗುರುತಿಸಿ ಮತ್ತು ನ್ಯಾಯುತವಾದ ಸಂಪನ್ಮೂಲಗಳು ಮತ್ತು ಅಧಿಕಾರ ಹಂಚುವಿಕೆಯು ಸರಿಯಾಗಿ ಆದಾಗ, ಇತರರ ಸಾಮಾಜಿಕ ಸ್ಥಿತಿ ಗತಿಗಳ ಕುರಿತು ಎಲ್ಲರೂ ಅರಿತು ನಡೆದಾಗ ಪ್ರತಿಯೊಬ್ಬರ ಹಕ್ಕುಗಳ ರಕ್ಷಣೆ ತಾನಾಗಿಯೇ ಆಗುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಘವ ಎನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು,ವೇದಿಕೆಯಲ್ಲಿ ಸಮಾಜಕಾರ್ಯ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಕಾಂತರಾಜು, ಸ್ನಾತಕೋತ್ತರ ಸಮಾಜಕಾರ್ಯ ವೇದಿಕೆಯ ಅಧ್ಯಕ್ಷರಾದ ಲವೀಶ್ ಕುಮಾರ್ ಪಿ .ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವೃಂದ, ಅಲ್ಪಸಂಖ್ಯಾತರ ವೇದಿಕೆಯ ಸದಸ್ಯರು ,ಸ್ನಾತಕ ಮತ್ತು ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಲ್ಮಾನ್ ಫಾರೀಷ್ ಸ್ವಾಗತಿಸಿ ,ನವ್ಯಶ್ರೀ ಎನ್ ವಂದಿಸಿ,ಪುನೀತಾ ಎ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.