Breaking News

ಕೆಪಿಎಸ್ ಗಾಂಧಿನಗರ : ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಂದು ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ, ದತ್ತಿನಿಧಿ ವಿತರಣೆ ಹಾಗೂ ಪೋಷಕರ ಸಭೆ

Advt_Headding_Middle
Advt_Headding_Middle

ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್, ಪ್ರಾಥಮಿಕ ವಿಭಾಗದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಂದು ಎಂಆರ್‌ಪಿಎಲ್ ನಿಂದ ಕೊಡಮಾಡಿದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ, ದತ್ತಿನಿಧಿ ವಿತರಣೆ ಹಾಗೂ ಪೋಷಕ ಸಭೆಯು ಫೆ. ೨೮ ರಂದು ನಡೆಯಿತು. ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಎಸ್.ಪಿ. ಉದ್ಘಾಟಸಿ ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ತಮ್ಮ ಆರೋಗ್ಯದ ಬಗ್ಗೆಯೂ ಗಮನಹರಿಸಬೇಕು. ಪುಸ್ತಕಗಳನ್ನು ಓದಿ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು. ವಿಜ್ಞಾನಿಗಳ, ರಾಷ್ಟ್ರ ನಾಯಕರ ಪುಸ್ತಕಗಳನ್ನು ಓದಿ ಜ್ಞಾನವನ್ನು ಹೆಚ್ಚಿಸಿಕೊಳ್ಳಿ ಎಂದು ಹೇಳಿದರು. ನಂತರ ಸಿ.ವಿ. ರಾಮನ್‌ರವರ ಭಾವಚಿತ್ರಕ್ಕೆ ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಪುಷ್ಪಾರ್ಚನೆಮಾಡಿ ನಮನ ಸಲ್ಲಿಸಿದರು.

ಎಸ್‌ಡಿಎಂಸಿ ಅಧ್ಯಕ್ಷ ಶಿವಕುಮಾರ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ದತ್ತಿನಿಧಿಯನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಸಂಘದ ಅಧ್ಯಕ್ಷ ಜೆ.ಕೆ. ರೈ, ಕಾರ್ಯದರ್ಶಿ ದೇವರಾಜ್ ಕುದ್ಪಾಜೆ, ಹಿ.ಪ್ರಾ.ಶಾಲಾ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಆರ್.ಕೆ. ಮಹಮ್ಮದ್, ಡಯಟ್‌ನ ಉಪನ್ಯಾಸಕಿ ಬಬಿತಾ, ಪ್ರೌಢ ಶಾಲೆಯ ಅರುಣ್ ಕುಮಾರ್, ಜೈ ಭಾರತ ಯುವಕ ಮಂಡಲದ ಮಾಜಿ ಅಧ್ಯಕ್ಷ ಅಬ್ದುಲ್ ಮಜೀದ್, ಮುಖ್ಯ ಶಿಕ್ಷಕ ಸೇರ ಕೋಟಿಯಪ್ಪ ಪೂಜಾರಿ, ಶಿಕ್ಷಣ ಸಂಯೋಜಕ ಚಂದ್ರಶೇಖರ್, ಸಿಆರ್‌ಪಿ ಗೋಪಾಲಕೃಷ್ಣ ಬನ, ಎಸ್‌ಡಿಎಂಸಿ ಉಪಾಧ್ಯಕ್ಷೆ ಪೌಝಿಯಾ, ಎಸ್‌ಡಿಎಂಸಿ ಸದಸ್ಯರು, ಪೋಷಕರು, ಹೆತ್ತವರು ಉಪಸ್ಥಿತರಿದ್ದರು.
ಹಿರಿಯ ಶಿಕ್ಷಕಿ ಶ್ರೀಮತಿ ಭವಾನಿ ಎ.ಜಿ. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ಜಯಶ್ರೀ ಎಂ.ಕೆ. ವಂದಿಸಿ, ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.