ನಿಂತಿಕಲ್ಲಿನಲ್ಲಿ ಆಧಾರ್ ನೋಂದಾವಣೆ ಮತ್ತು ತಿದ್ದುಪಡಿ ಮೇಳ

Advt_Headding_Middle
Advt_Headding_Middle

 ಸಾರ್ವಜನಿಕರು ಆಧಾರ್ ತಿದ್ದುಪಡಿ ಮಾಡಿಸಲು ಪರದಾಟ ಮಾಡುತ್ತಿರುವುದನ್ನು ತಪ್ಪಿಸಲು ಅಂಚೆ ಇಲಾಖೆ ಗ್ರಾಮ ಮಟ್ಟದಲ್ಲಿ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆಧಾರ್ ತಿದ್ದುಪಡಿ ಮೇಳ ನಡೆಸುತ್ತಿದೆ ಎಂದು ಸುಳ್ಯ ಅಂಚೆ ಇಲಾಖೆಯ ನಿರೀಕ್ಷಕ ಸುದೀಪ್ ಕುಮಾರ್ ಹೇಳಿದರು.


ನಿಂತಿಕಲ್ಲು ಕೆ.ಎಸ್ ಗೌಡ ಸಮೂಹ ವಿದ್ಯಾಸಂಸ್ಥೆ, ಕೆ.ಎಸ್ ಗೌಡ ಪ.ಪೂ.ಕಾಲೇಜು ಹಿರಿಯ ವಿದ್ಯಾರ್ಥಿ ಸಂಘ, ಜ್ಞಾನದೀಪ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಬೆಳ್ಳಾರೆ, ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವುಗಳ ಆಶ್ರಯದಲ್ಲಿ ಕೆ.ಎಸ್ ಗೌಡ ಸಮೂಹ ವಿದ್ಯಾ ಸಂಸ್ಥೆಯಲ್ಲಿ ನಡೆದ 2 ದಿನಗಳ ಆಧಾರ್ ನೋಂದಾವಣೆ ಹಾಗೂ ತಿದ್ದುಪಡಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಚೆ ಇಲಾಖೆಯ ವಿವಿಧ ಸೇವೆಗಳ ಬಗ್ಗೆ ಸುದೀಪ್ ಕುಮಾರ್ ಮಾಹಿತಿ ನೀಡಿದರು.
ನಿಂತಿಕಲ್ಲು ಕೆ.ಎಸ್ ಗೌಡ ಸಮೂಹ ವಿದ್ಯಾಸಂಸ್ಥೆಯ ಅಧ್ಯಕ್ಷ ಅಶೋಕ್ ಕುಮಾರ್ ಕೆ.ಎಸ್ ಅಧ್ಯಕ್ಷತೆ ವಹಿಸಿದ್ದರು. ನಿಂತಿಕಲ್ಲು ಕೆ.ಎಸ್ ಗೌಡ ಪ್ರೌಢಶಾಲೆಯ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ರೈ ಪಾದೆಕಲ್ಲು, ಪ.ಪೂ ಕಾಲೇಜು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಕುಮಾರಸ್ವಾಮಿ ಕೆ.ಎಸ್, ಸುಳ್ಯ ಅಂಚೆ ಇಲಾಖೆಯ ಮೇಲ್ವಿಚಾರಕ ಆನಂದ್ ಸಿ, ಬೆಳ್ಳಾರೆಯ ಜ್ಞಾನದೀಪ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಉಮೇಶ್, ಪರಿವಾರ ಪಂಚಲಿಂಗೇಶ್ವರ ಐಟಿಐನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಪೈಸಾರಿ, ಐಟಿಐನ ಪ್ರಾಂಶುಪಾಲ ಗುರುಪ್ರಸಾದ್, ಕೆ.ಎಸ್ ಗೌಡ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಉಮೇಶ್ ಗೌಡ ಉಪಸ್ಥಿತರಿದ್ದರು. ಕೆ.ಎಸ್ ಗೌಡ ಪ.ಪೂ ಕಾಲೇಜು ಪ್ರಾಂಶುಪಾಲ ಸದಾನಂದ ರೈ ಕುವೆಂಜ ಪ್ರಸ್ತಾವಿಸಿ, ಸ್ವಾಗತಿಸಿದರು. ಕೆ.ಎಸ್ ಗೌಡ ಪ.ಪೂ.ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಜಿತ್ ಗೌಡ ಐವರ್ನಾಡು ವಂದಿಸಿದರು. ಕಿರಿಯ ತರಬೇತಿ ಅಧಿಕಾರಿ ಪ್ರಸನ್ನ ಕಾರ್ಯಕ್ರಮ ನಿರ್ವಹಿಸಿದರು. ಸುಳ್ಯ ಅಂಚೆ ಇಲಾಖೆಯ ತಾಂತ್ರಿಕ ವಿಭಾಗದ ಕೃಪೇಶ್ ಮತ್ತು ನಿಶಿತ್ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.