Breaking News

ಹರಿಣಿ ಸದಾಶಿವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ

Advt_Headding_Middle
Advt_Headding_Middle

ಸಮಾಜ ಸೇವೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಶ್ರಮಿಸಿದ ಸುಳ್ಯದ ಹರಿಣಿ ಸದಾಶಿವ ಅವರಿಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮಾ. ೮ರಂದು ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯದ ಸಾಧಕ ಮಹಿಳೆಯರನ್ನು ಗುರುತಿಸಿ, ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಪ್ರಶಸ್ತಿ ಪ್ರಧಾನ ಮಾಡಿದರು. ಶಾಸಕ ಉದಯ ಗರುಡಾಚಾರ್, ವಿಧಾನ ಪರಿಷತ್ ಸದಸ್ಯ ರಮೇಶ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಮೊದಲಾದವರು ಉಪಸ್ಥಿತರಿದ್ದರು.


ಹರಿಣಿ ಸದಾಶಿವ ಅವರು ವಿಕಲಚೇತನರ ಶಾಲೆ ನಡೆಸುತ್ತಿದ್ದು, ಮಹಿಳಾ ಸಬಲೀಕರಣಕ್ಕಾಗಿ ಹಲವು ಕಾರ್ಯಕ್ರಮ ಹಮ್ಮಿಕೊಂಡವರು. ಸಾಂತ್ವನ ಕೇಂದ್ರ, ಮಹಿಳಾ ಸಮಾಜಕ್ಕಾಗಿ ೧ ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ, ವಿದ್ಯಾರ್ಥಿನಿಯರಿಗೆ ಹಾಸ್ಟೆಲ್, ವೃತ್ತಿ ತರಬೇತಿ, ಫ್ಯಾಶನ್ ಡಿಸೈನ್ ಕೋರ್ಸ್, ಸಂತ್ರಸ್ಥ ಮಹಿಳೆಯರಿಗೆ ಆಶ್ರಯ, ಬಡವರ ವಿವಾಹಕ್ಕೆ ಪ್ರೋತ್ಸಾಹ, ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಸಹಾಯ, ಪುನರ್ವಸತಿ ಕೇಂದ್ರ ಹೀಗೆ ವಿವಿಧ ರೀತಿಯಲ್ಲಿ ಮಹಿಳೆಯರ ಅಭ್ಯುದಯಕ್ಕಾಗಿ ಶ್ರಮಿಸುತ್ತಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರಧಾನ ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.