ಕುಮಾರಸ್ವಾಮಿ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Advt_Headding_Middle
Advt_Headding_Middle

ಕುಮಾರಸ್ವಾಮಿ ಶಾಲೆಯ ನೇತೃತ್ವದಲ್ಲಿ ಐ ಮಿತ್ರ ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿಗಳ ಹೆತ್ತವರಿಗೆ ಹಾಗೂ ಪೋಷಕರಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಯಜ್ಞೇಶ್ ಆಚಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಕಣ್ಣು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದು ಇಡೀ ದೇಹದ ಆರೋಗ್ಯ ಕಣ್ಣಿನ ಮೂಲಕ ತಿಳಿಯುತ್ತದೆ ಎಂದರು. ಹೇಮಚಂದ್ರ ವ್ಯವಸ್ಥಾಪಕರು ಐ ಮಿತ್ರ ಸುರತ್ಕಲ್ ಮಾತನಾಡಿ ನಮ್ಮ ಸುತ್ತಲಿನ ಪ್ರಪಂಚವನ್ನು ನೋಡಲು ಬೇಗನೆ ಗ್ರಹಿಕೆಗೆ ಒಳಪಡುವ ನಮ್ಮ ಅಂಗವೆಂದರೆ ಅದು ನಮ್ಮ ಕಣ್ಣುಗಳು ಇಂತಹ ಪ್ರಮುಖ ಅಂಗದ ಆರೈಕೆ ಮತ್ತು ತಪಾಸಣೆ ಕೂಡ ಅಷ್ಟೆ ಮುಖ್ಯ ಎಂದು ಕಣ್ಣು ಪರೀಕ್ಷೆಯ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ್, ಸಂಚಾಲಕರಾದ ಚಂದ್ರಶೇಖರ್ ನಾಯರ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ ಎಚ್ ಉಪಸ್ಥಿತರಿದ್ದರು. ಶಿಕ್ಷಕಿ ಕು| ಶ್ವೇತಾ ಸ್ವಾಗತಿಸಿದರು ಹಾಗೂ ಶಿಕ್ಷಕಿ ಶ್ರೀಮತಿ ಸುಮಿತ್ರ ವಂದಿಸಿದರು. ಶಿಕ್ಷಕ ಶ್ರೀ ಯೋಗನಾಥ್ ಎಸ್ ನಿರೂಪಿಸಿದರು. ನಂತರ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಹೆತ್ತವರಿಗೆ ಮತ್ತು ಪೋಷಕರಿಗೆ ಕಣ್ಣಿನ ಪರೀಕ್ಷೆ ನಡೆಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.