ಕೆವಿಜಿ ಪಾಲಿಟೆಕ್ನಿಕ್ :ವಿಶ್ವಮಹಿಳಾ ದಿನಾಚರಣೆ

Advt_Headding_Middle
Advt_Headding_Middle

ಸುಳ್ಯದ ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್‌ನ ಮಹಿಳಾ ಸಬಲೀಕರಣ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವರೆಡ್‌ಕ್ರಾಸ್ ಘಟಕಗಳ ಸಹಯೋಗದಲ್ಲಿ ವಿಶ್ವಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಅಧ್ಯಕ್ಷೆ ಬಿಂದು ಕೆ.ವಿ ಅಧ್ಯಕ್ಷತೆ ವಹಿಸಿದ್ದರು .ಪರೀಕ್ಷಾ ವಿಭಾಗದ ಪ್ರಥಮದರ್ಜೆ ಸಹಾಯಕಿ ಪೂರ್ಣಿಮಾ ಎನ್.ಜಿ ಸಮಾರಂಭವನ್ನು ಉದ್ಘಾಟಿಸಿದರು. ಪ್ರಾಂಶುಪಾಲ ಜಯಪ್ರಕಾಶ್ ಕೆ ವೇದಿಕೆಯಲ್ಲಿಉಪಸ್ಥಿತರಿದ್ದು ಶುಭ ಹಾರೈಸಿದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿಗಳಾದ ಚಂದ್ರಶೇಖರ ಬಿಳಿನೆಲೆ, ಸುನಿಲ್‌ಕುಮಾರ್ ಎನ್.ಪಿ, ಕಛೇರಿ ಅಧೀಕ್ಷಕ ಶಿವರಾಮ ಕೇರ್ಪಳ ಮೊದಲಾದವರು ಉಪಸ್ಥಿತರಿದ್ದರು. ಮಹಿಳಾ ಸಿಬ್ಬಂದಿಗಳಿಗೆ ಮತ್ತು ವಿದ್ಯಾರ್ಥಿನಿಯರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು .ಎನ್ನೆಸ್ಸೆಸ್ ಘಟಕ ನಾಯಕಿ ಶರಣ್ಯಾ ಸ್ವಾಗತಿಸಿ, ಭವ್ಯಶ್ರೀ ವಂದಿಸಿದರು. ಕಿಶೋರ್ ಎ.ಪಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.