Breaking News

ಜಾಲ್ಸೂರು: ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮ

Advt_Headding_Middle
Advt_Headding_Middle


ಜಾಲ್ಸೂರು, ಕನಕಮಜಲು, ಅಜ್ಜಾವರ, ಮಂಡೆಕೋಲು ಹಾಗೂ ಆಲೆಟ್ಟಿ ಗ್ರಾಮಗಳನ್ನೊಳಗೊಂಡ ಕಂದಾಯ ಅದಾಲತ್ ಕಾರ್ಯಕ್ರಮವು ಜಾಲ್ಸೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಮಾ.12ರಂದು ಜರುಗಿತು.


ಜಾಲ್ಸೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಎಸ್. ನಾಯಕ್ ಅವರು ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್ ಅವರ ಉಪಸ್ಥಿತಿಯಲ್ಲಿ ನಡೆದ ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಪಿಂಚಣಿಯ ಆದೇಶ ಪ್ರತಿಗಳನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಜಾಲ್ಸೂರು ಹಾಗೂ ಕನಕಮಜಲು ಗ್ರಾಮಕರಣಿಕರಾದ ಕು. ತೇಜಾವತಿ ಎಲ್.ಡಿ.,ಅಜ್ಜಾವರ, ಮಂಡೆಕೋಲು ಹಾಗೂ ಆಲೆಟ್ಟಿಯ ಗ್ರಾಮಕರಣಿಕರಾದ ಶರತ್ ಕುಮಾರ್, ಸುಳ್ಯ ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಉಪ ತಹಶೀಲ್ದಾರ್ ಚಂದ್ರಕಾಂತ್, ಜಾಲ್ಸೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷ ದಿನೇಶ್ ಅಡ್ಕಾರು, ಜಾಲ್ಸೂರು ಕ್ಷೇತ್ರದ ಜಿ.ಪಂ. ಸದಸ್ಯೆ ಶ್ರೀಮತಿ ಪುಷ್ಪಾವತಿ ಬಾಳಿಲ, ತಾ.ಪಂ.ಸದಸ್ಯ ತೀರ್ಥರಾಮ ಜಾಲ್ಸೂರು, ಮಂಡೆಕೋಲು ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಮೋಹಿನಿ, ಸದಸ್ಯರುಗಳಾದ ಬಾಲಚಂದ್ರ ದೇವರಗುಂಡ, ಶ್ರೀಮತಿ ವಿನುತಾ ಪಾತಿಕಲ್ಲು, ಆಲೆಟ್ಟಿ ಗ್ರಾ.ಪಂ.ಅಧ್ಯಕ್ಷ ಹರೀಶ್ ರಂಗತ್ತಮಲೆ, ಜಾಲ್ಸೂರು ಗ್ರಾ.ಪಂ. ಪ್ರಭಾರ ಅಭಿವೃದ್ಧಿ ಅಧಿಕಾರಿ ಹೂವಪ್ಪ, ಕಾರ್ಯದರ್ಶಿ ಸುಬ್ಬಯ್ಯ, ಜಾಲ್ಸೂರು ಗ್ರಾ.ಪಂ.ಸದಸ್ಯರುಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.