Breaking News

ಗೌಡರ ಯುವ ಸೇವಾ ಸಂಘದ ಬೆಳ್ಳಿ ಹಬ್ಬ ವರ್ಷಾಚರಣೆಯ ಉದ್ಘಾಟನೆಯ ಪ್ರಯುಕ್ತ ಲಕ್ಷ್ಮೀ ಸಹಿತ ಸತ್ಯನಾರಾಯಣ ಪೂಜೆ

Advt_Headding_Middle
Advt_Headding_Middle


ಗೌಡರ ಯುವ ಸೇವಾ ಸಂಘದ ಬೆಳ್ಳಿ ಹಬ್ಬ ವರ್ಷಾಚರಣೆಯ ಉದ್ಘಾಟನೆಯ ಪ್ರಯುಕ್ತ ಲಕ್ಷ್ಮೀ ಸಹಿತ ಸತ್ಯನಾರಾಯಣ ಪೂಜೆಯು ಮಾ.೧೪ರಂದು ಸುಳ್ಯದ ಕೊಡಿಯಾಲಬೈಲಿನಲ್ಲಿರುವ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಪುರೋಹಿತ ನಾಗರಾಜ ಭಟ್ಟರ ಪೌರೋಹಿತ್ವದಲ್ಲಿ ಪೂಜಾ ಕಾರ್ಯಕ್ರಮ ನಡೆಯಿತು.


ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ವಹಿಸಿದ್ದರು. ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ| ರೇಣುಕಾಪ್ರಸಾದ್ ಕೆ.ವಿ. ಉದ್ಘಾಟನೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಅಕ್ಷಯ್ ಕೆ.ಸಿ., ಅರೆಭಾಷೆ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ ವೇದಿಕೆಯಲ್ಲಿದ್ದರು. ಗೌಡ ಸಂಘದ ಪ್ರಮುಖರಾದ ದಿನೇಶ್ ಮಡಪ್ಪಾಡಿ, ಎ.ವಿ.ತೀರ್ಥರಾಮ, ಡಾ| ಎನ್.ಎ.ಜ್ಞಾನೇಶ್, ಪಿ.ಎಸ್.ಗಂಗಾಧರ್, ತೇಜಪ್ರಸಾದ್ ಅಮೆಚೂರು, ಐ.ಬಿ.ಚಂದ್ರಶೇಖರ್, ಲತಾ ಕುದ್ಪಾಜೆ, ಮಹಿಳಾ ಸಮಿತಿ ಅಧ್ಯಕ್ಷೆ ಪುಷ್ಪಾ ಮಾಣಿಬೆಟ್ಟು, ಚಂಚಲಾಕ್ಷಿ ಕತ್ಲಡ್ಕ, ಪುಷ್ಪಾ ಪೂಂಬಾಡಿ, ತರುಣ ಘಟಕದ ಅಧ್ಯಕ್ಷ ರಜತ್ ಗೌಡ, ಕಿರಣ್ ಗುಡ್ಡೆಮನೆ ಇದ್ದರು. ಪಿ.ಸಿ.ಜಯರಾಮ್ ಸ್ವಾಗತಿಸಿ, ಎ.ವಿ.ತೀರ್ಥರಾಮ ಪ್ರಾಸ್ತಾವಿಕವಾಗಿ ಮಾತನಾಡಿದರು. ದೊಡ್ಡಣ್ಣ ಬರೆಮೇಲು ವಂದಿಸಿದರು. ಚಂದ್ರಶೇಖರ ಪೇರಾಲು ಕಾರ್ಯಕ್ರಮ ನಿರೂಪಿಸಿದರು.


ಕಾರ್ಯಕ್ರಮದಲ್ಲಿ ಎಂ.ಜಿ.ಎಂ. ವಿದ್ಯಾಸಂಸ್ಥೆಗೆ ೩ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ ಮಿತ್ತಮೂಲೆ ರಾಮಚಂದ್ರ ಗೌಡ ದಂಪತಿಗಳನ್ನು ಗೌರವಿಸಲಾಯಿತು.
ಹಾಗೂ ಇತ್ತೀಚೆಗೆ ನಿಧನರಾದ ಮಿಲ್ಕ್ ಮಾಸ್ತರ್ ರಾಘವ ಗೌಡ ಪಲ್ಲತಡ್ಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.