Breaking News

ಬೆಳ್ಳಾರೆ: ಅಜಪಿಲ ಶ್ರೀಮಹಾವಿಷ್ಣುಮೂರ್ತಿ ದೈವಸ್ಥಾನದ ಬ್ರಹ್ಮ ಕಲಶ ಆಮಂತ್ರಣ ಪತ್ರ ಬಿಡುಗಡೆ

Advt_Headding_Middle
Advt_Headding_Middle


ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನವು ಜೀರ್ಣೋದ್ಧಾರಗೊಂಡು ಏ. 2, 3ರಂದು ಕುಂಟಾರು ಬ್ರಹ್ಮಶ್ರೀ ವಾಸುದೇವ ತಂತ್ರಿ ಮತ್ತು ಕುಂಟಾರು ಬ್ರಹ್ಮಶ್ರೀ ರವೀಶ ತಂತ್ರಿಗಳವರ ಮಾರ್ಗದರ್ಶನದಲ್ಲಿ ಬ್ರಹ್ಮ ಕಲಶೋತ್ಸವ ಹಾಗೂ ಏ. 7 ಮತ್ತು8 ರಂದು ಒತ್ತೆಕೋಲ ನಡಾವಳಿಯು ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆಯು ಮಾ. 14 ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ನಡೆಯಿತು. ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸುನೀಲ್ ರೈ ಪುಡ್ಕಜೆ, ಗೌರವಾಧ್ಯಕ್ಷ ರಾದ ಆನಂದ ರೈ ಪುಡ್ಕಜೆ, ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಕಾರ್ಯಾಧ್ಯಕ್ಷ ರಾದ ಎ.ಕೆ. ಮಣಿಯಾಣಿ, ಪ್ರಧಾನ ಕಾರ್ಯದರ್ಶಿ ಸಂಜಯ್ ನೆಟ್ಟಾರು, ಅಜಪಿಲ ಶ್ರೀ ಮಹಾವಿಷ್ಣುಮೂರ್ತಿ ಸೇವಾ ಸಮಿತಿ ಅಧ್ಯಕ್ಷ ಅಮೃತ್ ಕುಮಾರ್ ಕಿಲಂಗೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪ್ರದೀಪ್ ಕುಮಾರ್ ರೈ ಪನ್ನೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಬ್ರಹ್ಮ ಕಲಶೋತ್ಸವದ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂಜಯ್ ನೆಟ್ಟಾರು ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.