Breaking News

ಅಮರಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ ಕೊರೊನ ವೈರಸ್ ಮಾಹಿತಿ ಸಭೆ

Advt_Headding_Middle
Advt_Headding_Middle

 

ಅಮರ ಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ ಕೊರೊನ ವೈರಸ್ ಬಗ್ಗೆ ಮಾಹಿತಿ ಹಾಗೂ ನಿಯಮಗಳ ಕುರಿತು ವಿಶೇಷ ಸಭೆಯನ್ನು ಮಾ.೨೩ ರಂದು ನಡೆಸಲಾಯಿತು. ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸೀತಾ ಎಚ್ ಅಧ್ಯಕ್ಷತೆ ವಹಿಸಿದ್ದರು .ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಅಂಗನವಾಡಿ ಶಿಕ್ಷಕಿಯರು ಹಾಗೂ ಪಂಚಾಯತ್ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು .

ಕೊರೊನ ವೈರಸ್ ಸೋಂಕಿನ ತಡೆಗಟ್ಟುವ ಬಗ್ಗೆ ಮಾಹಿತಿಯನ್ನು ಈ ಸಂದರ್ಭದಲ್ಲಿ ನೀಡಲಾಯಿತು .ಗುಂಪು ಗುಂಪಲ್ಲಿ ಜನ ಸೇರದಂತೆ ಕಟ್ಟುನಿಟ್ಟಿನ ಕಟ್ಟೆಚ್ಚರ ವಹಿಸುವುದು .ವಿದೇಶದಿಂದ ಹಾಗೂ ಬೇರೆ ರಾಜ್ಯಗಳಿಂದ ಬಂದಿರುವಂತ ವ್ಯಕ್ತಿಗಳಿದ್ದರೆ ಅವರನ್ನು ಚಿಕಿತ್ಸೆಗೆ ಒಳಪಡಿಸುವಂತೆ ಮನವೊಲಿಸಿ ಆರೋಗ್ಯ ಇಲಾಖೆಯವರಿಗೆ ತಿಳಿಸುವಂತೆ ಸಭೆಯಲ್ಲಿ ಸೂಚಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.