ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಕೊರೊನಾ ಮುನ್ನೆಚ್ಚರಿಕೆ ಸಮಿತಿ ರಚನೆ

Advt_Headding_Middle
Advt_Headding_Middle

 

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಹಾಗೂ ಇತರ ಸಾಂಕ್ರಾಮಿಕ ರೋಗಗಳ ಕುರಿತಾಗಿ ಗ್ರಾಮ ಮಟ್ಟದ ಮೇಲ್ವಿಚಾರಣಾ ಸಮಿತಿಯನ್ನು ಮಾ.23 ರಂದು ರಚಿಸಲಾಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚೈತ್ರಾ ಕಟ್ಟತ್ತಾರುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಳ್ಳಾರೆ ಆರೋಗ್ಯ ಕೇಂದ್ರದ ಡಾ.ಅಶ್ವಥಿ,ಅಂಗನವಾಡಿ ಕಾರ್ಯಕರ್ತೆಯರು,ಆಶಾಕಾರ್ಯಕರ್ತೆಯರು,ಗ್ರಾಮಮಟ್ಟದ ಅಧಿಕಸರಿಗಳು ಉಪಸ್ಥಿತರಿದ್ದರು.


ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ಸ್ವಾಗತಿಸಿ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಸೋಂಕಿನಿಂದ ನಮ್ಮನ್ನು ಹಾಗೂ ಎಲ್ಲರನ್ನು ರಕ್ಷಿಸಿಕೊಳ್ಳಲು ಅನುಸರಿಸಬೇಕಾದ ಕ್ರಮಗಳು ಮತ್ತು ಈ ಸೋಂಕನ್ನು ನಿವಾರಿಸುವ ಬಗ್ಗೆ ಸಂಘಟಿತ ಜವಾಬ್ದಾರಿಗಳ ಬಗ್ಗೆ ಮತ್ತು ನಾಗರಿಕನ ಜವಾಬ್ದಾರಿಗಳ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು.


ಡಾ.ಅಶ್ವಥಿಯವರು ಕೊರೊನಾ ಸೋಂಕು ಹರಡದಂತೆ ಅನುಸರಿಸಬೇಕಾದ ವೈದ್ಯಕೀಯ ಅಂಶಗಳನ್ನು ತಿಳಿಸಿದರು.
ಬಳಿಕ ಸಮಿತಿಯನ್ನು ರಚಿಸಲಾಯಿತು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.