ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಿಗ್ಗೆ 6 ರಿಂದ 12 ರವರೆಗೆ ಮಾತ್ರ ದಿನಸಿ ಅಂಗಡಿಗಳು ಓಪನ್

Advt_Headding_Middle
Advt_Headding_Middle

 

ಉಸ್ತುವಾರಿ ಸಚಿವರ ನೇತೃತ್ವದ ಸಭೆಯ ಬಳಿಕ ಜಿಲ್ಲಾಧಿಕಾರಿ ಟ್ವೀಟ್

ನೆರೆಯ ತಾಲೂಕುಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಿಗ್ಗೆ 6 ರಿಂದ 12 ರವರೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಅವಶ್ಯ ಸಾಮಾಗ್ರಿ ಖರೀದಿಸಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಟ್ವೀಟ್ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಇಂದು ಸಂಜೆ ಸಂಸದರು , ಶಾಸಕರು ಮತ್ತು ಅಧಿಕಾರಿಗಳ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು ಇಂತಿದೆ.

* ಮಾ.26ರಿಂದ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ನಗರದ ಸೆಂಟ್ರಲ್ ಮಾರ್ಕೆಟ್ ನಲ್ಲಿ ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೆ ಮಾತ್ರ ದಿನಸಿ ವಸ್ತುಗಳ ಖರೀದಿಗೆ ಅವಕಾಶ. ಯಾವುದೇ ಕಾರಣಕ್ಕೂ ಸಾರ್ವಜನಿಕರು ವಸ್ತುಗಳನ್ನು ಖರೀದಿಸುವಂತಿಲ್ಲ.

* ಉಳಿದಂತೆ ದಿನಸಿ ಅಂಗಡಿಗಳಲ್ಲಿ ಬೆಳಗ್ಗೆ 6 ರಿಂದ 12:00 ತನಕ ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ.

* ಪ್ರಧಾನಿ ಮೋದಿಯವರು
ದೇಶಾದ್ಯಂತ 21 ದಿನಗಳ ಲಾಕ್ ಡೌನ್ ಗೆ ಕರೆ ನೀಡಿದ್ದು, ಇದನ್ನು ಯಶಸ್ವಿಗೊಳಿಸಿ ಕೊರೊನಾ ನಿಯಂತ್ರಣಕ್ಕೆ ಎಲ್ಲರ ಸಹಕಾರ ಅತ್ಯಗತ್ಯ ಎಂದು ಸಚಿವರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.