ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸ್ವಾಮೀಜಿ ಮತ್ತು ಇತರರ ಪ್ರವೇಶ

Advt_Headding_Middle
Advt_Headding_Middle

 

ಆದೇಶ ಉಲ್ಲಂಘನೆಯೆಂದು ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರಿಂದ ದೂರು

ನಿಯಮ‌ ಉಲ್ಲಂಘನೆ ಆಗಿಲ್ಲ : ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಸ್ಪಷ್ಟನೆ


ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಪುಟ ನರಸಿಂಹ ಮಠದ ಸ್ವಾಮೀಜಿ ಮತ್ತು ಇತರರ ಪ್ರವೇಶ ಮಾಡಿದ್ದು, ಇದು ಆದೇಶದ ಉಲ್ಲಂಘನೆಯೆಂದು ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯರು ದೂರು ನೀಡಿದ್ದಾರೆ.
ನಿಯಮ‌ ಉಲ್ಲಂಘನೆ ಆಗಿಲ್ಲ ಎಂದು ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಸ್ಪಷ್ಟಪಡಿಸಿದ್ದಾರೆ.

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ದೇವರ ದರ್ಶನ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ದೇವರ ದರ್ಶನ ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದರೂ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀಗಳು ಮತ್ತು ಇತರರು ದೇವಾಲಯ ಪ್ರವೇಶಿಸಿ ದೇವರ ದರ್ಶನ ಪಡೆದು ಲಾಕ್ ಡೌನ್ ಆದೇಶ ಉಲ್ಲಂಘಿಸಲಾಗಿದೆ. ಅಲ್ಲದೆ ಸಾಮಾಜಿಕ ಅಂತರ ಕಾಯದೆ ದೇವರ ದರ್ಶನ ಪಡೆದಿರುತ್ತಾರೆ. ಇದಕ್ಕೆ ಸಾಕ್ಷಿಯಾಗಿ ದೇವಸ್ಥಾನದ ಸಿ.ಸಿ ಕ್ಯಾಮಾರಾ ದೃಶ್ಯಾವಳಿಗಳನ್ನು ಪರೀಕ್ಷಿಸಿ ಸಂಬಂಧಿಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ದೇವಾಲಯದ ಆಡಳಿತಾಧಿಕಾರಿ ಅವರಿಗೆ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕ್ಕಳ ಹಾಗೂ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಪ್ರಶಾಂತ್ ಮಾಣಿಲ ದೂರು ಸಲ್ಲಿಸಿದ್ದಾರೆ.

ಈ ಬಗ್ಗೆ ಮಹೇಶ್ ಕುಮಾರ್ ಕರಿಕ್ಕಳ ಅವರನ್ನು ಸಂಪರ್ಕಿಸಿದಾಗ, ಕಾನೂನಾತ್ಮಕವಾಗಿ ಯಾರೂ ದೇವಸ್ಥಾನ ಒಳಗೆ ಈಗ ಹೋಗುವಂತಿಲ್ಲ. ಆದರೂ 7-8 ಜನ ತಿಳಿದವರೇ ದೇವಸ್ಥಾನ ಪ್ರವೇಶಿಸಿರುವುದು ಕಂಡು ಬಂದಿದ್ದು ಇದು ಕಾನೂನು ಉಲ್ಲಂಘನೆ ಈ ಬಗ್ಗೆ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

” ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಶ್ರೀ ಮಠದ ಮಧ್ಯೆ ಅವಿನಾಭಾವ ಸಂಬಂಧವಿದೆ. ಕೆಲವೊಂದು ಸಾಂಪ್ರದಾಯಿಕ ಆಚರಣೆಗಳು ಅನಾದಿಕಾಲದಿಂದ ನಡೆದುಕೊಂಡು ಬಂದಿರುತ್ತದೆ. ಅದರಂತೆ ನಾವು ದೇವರ ದರ್ಶನಕ್ಕೆ ಮಾಮೂಲಿನಂತೆ ಹೋಗುತಿದ್ದೇವೆ. ಯಾವುದೇ ರೀತಿಯ ನಿಯಮಗಳ ಉಲ್ಲಂಘನೆ ಆಗಿರುವುದಿಲ್ಲ. ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲಾಗಿದೆ” ಎಂದು ಸುಬ್ರಹ್ಮಣ್ಯ ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಸುದ್ದಿಗೆ ಸ್ಪಷ್ಟನೆ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.