HomePage_Banner
HomePage_Banner
HomePage_Banner

ಲಾಕ್ ಡೌನ್ ತೆರವುಗೊಂಡು ಜನಜೀವನ ಸಹಜ ಸ್ಥಿತಿಗೆ ಮರಳಿದ ಬಳಿಕವಷ್ಟೇ ಎಸ್.ಎಸ್.ಎಲ್.ಸಿ. ಪರೀಕ್ಷಾ ವೇಳಾಪಟ್ಟಿ ಪ್ರಕಟ

 

ಲಾಕ್ ಡೌನ್ ತೆರವುಗೊಂಡು ಜನಜೀವನ ಸಹಜ ಸ್ಥಿತಿಗೆ ಮರಳಿದ ಬಳಿಕವಷ್ಟೇ ಎಸ್.ಎಸ್.ಎಲ್.ಸಿ. ಪರೀಕ್ಷಾ ವೇಳಾ ಪಟ್ಟಿ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಆಯುಕ್ತರು ಪ್ರಕಟಿಸಿದ್ದಾರೆ.


2019-20ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು 27.3.2020 ರಿಂದ 9.4.2020ರವರೆಗೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಆದರೆ ಕರ್ನಾಟಕ ರಾಜ್ಯದಲ್ಲಿ ಕೊರೋನಾ ವೈರಸ್ ಕೋವಿಡ್ – 19 ವ್ಯಾಪಿಸುತ್ತಿರುವುದನ್ನು ಗಮನಿಸಿ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿಯೂ ಸಹ ಸರ್ಕಾರದಿಂದ ಲಾಕ್ ಡೌನ್ ವಿಧಿಸಲಾಗಿರುತ್ತದೆ. ಇದರಿಂದಾಗಿ ಪರೀಕ್ಷೆಯನ್ನು ಮುಂದೂಡಿ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದೆಂದು ಈ ಹಿಂದೆ ತಿಳಿಸಲಾಗಿರುತ್ತದೆ.
ಈ ಸಂಬಂಧ ಕೋವಿಡ್ -19 ಸೋಂಕು ನಿಯಂತ್ರಣಕ್ಕೆ ಬಂದು, ವಿಧಿಸಲಾಗಿರುವ ಲಾಕ್ ಡೌನ್ ತೆರವುಗೊಳಿಸಿ ಸಾಮಾನ್ಯ ಜನಜೀವನ ಸಹಜ ಸ್ಥಿತಿಗೆ ಮರಳಿದ ನಂತರ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು. ಅದಕ್ಕೂ ಮೊದಲು ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಾಗಲು ಹತ್ತು ದಿನಗಳ ಕಾಲ ಪುನರ್ ಮನನ ತರಗತಿಯನ್ನು ನಡೆಸಿ ಆನಂತರ ಪರಿಷ್ಕೃತ ವೇಳಾಪಟ್ಟಿಯಂತೆ 2019-20 ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ನಡೆಸಲಾಗುವುದು. ಆದ್ದರಿಂದ ಈ ಬಗ್ಗೆ ವಿದ್ಯಾರ್ಥಿಗಳಾಗಲಿ, ಪೋಷಕರಾಗಲಿ ಆತಂಕಪಡುವ ಅಗತ್ಯವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.