ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಹೃದಯಾಘಾತದಿಂದ ನಿಧನ

Advt_Headding_Middle
Advt_Headding_Middle

 

ತೊಡಿಕಾನ ದೇವಸ್ಥಾನದಲ್ಲಿ ಕಾರ‍್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿದ್ದ ಹರಿಶ್ಚಂದ್ರರವರು (50 ವ.) ಹೃದಯಾಘಾತಕ್ಕೀಡಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಎ. 14ರಂದು ನಿಧನ ಹೊಂದಿದರು.

ಹರೀಶ್ಚಂದ್ರರವರು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಮುಖ್ಯ ಕಾರ‍್ಯನಿರ್ವಹಣಾಧಿಕಾರಿಯಾಗಿ, ಕೊಕ್ಕಡದ ಶ್ರೀ ಸೌತಡ್ಕ ಮಹಾಗಣಪತಿ ದೇವಳ, ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಭ ದೇವಸ್ಥಾನ ಮತ್ತು ತೊಡಿಕಾನ ದೇವಸ್ಥಾನದಲ್ಲಿ ಪ್ರಭಾರ ಕಾರ‍್ಯನಿರ್ವಹಣಾಧಿಕಾರಿಯಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಮೃತರು ಈ ಹಿಂದೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಸವಣೂರು ಸಮೀಪದ ಪಾಣೆ ನಿವಾಸಿಯಾಗಿರುವ ಇವರು ಪ್ರಸ್ತುತ ಮಂಗಳೂರಿನ ಕೊಟ್ಟಾರಚೌಕಿಯಲ್ಲಿ ವಾಸವಿದ್ದರು. ಇವರು ಪತ್ನಿ ಶ್ರೀಮತಿ ತ್ರಿವೇಣಿ, ಪುತ್ರರಾದ ಯಘ್ನೇಶ್, ಶಿರಾಗ್‌ರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.