ಅರಂತೋಡು ಸಹಕಾರಿ ಸಂಘದಿಂದ ಸೂಪರ್ ಮಾರ್ಕೆಟ್

Advt_Headding_Middle
Advt_Headding_Middle

ಒಂದೇ ಸೂರಿನಡಿ ದಿನಸಿ ಹಾಗೂ ಗೃಹೋಪಯೋಗಿ ವಸ್ತುಗಳ ಮಳಿಗೆ

 

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ದಿನಸಿ ಹಾಗೂ ಗೃಹೋಪಯೋಗಿ ವಸ್ತುಗಳ ಮಳಿಗೆ ಸೂಪರ್ ಮಾರ್ಕೆಟ್ ಅತೀ ಶೀಘ್ರದಲ್ಲೇ ಅರಂತೋಡಿನ ಸಹಕಾರಿ ಸದನದಲ್ಲಿ ಶುಭಾರಂಭಗೊಳ್ಳಲಿದೆ. ಅರಂತೋಡು ಮತ್ತು ತೊಡಿಕಾನ ಗ್ರಾಮಗಳ ಸದಸ್ಯರು ಮತ್ತು ಸಾರ್ವಜನಿಕ ರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಈ ಮಳಿಗೆಯನ್ನು ಆರಂಭಿಸಲಾಗಿದೆ.ಒಂದೇ ಸೂರಿನಡಿ ಎಲ್ಲಾ ವಸ್ತುಗಳು ಸಿಗುವುದರಿಂದ ಸಹಕಾರಿ ಸಂಘದ ವ್ಯವಹಾರಕ್ಕೆ ಹಾಗೂ ಪಡಿತರ ಖರೀದಿಗೆ ಬರುವವರಿಗೆ ಅನುಕೂಲವಾಗಲಿದೆ. ಅಲ್ಲದೇ    ಉತ್ತಮ ಗುಣಮಟ್ಟದ ವಸ್ತುಗಳು ಮಿತದರದಲ್ಲಿ ದೊರೆಯುವುದರಿಂದ ಗ್ರಾಹಕರಿಗೆ ಹೆಚ್ಚು ಪ್ರಯೋಜನವಾಗಲಿದೆ.ವಿಶಾಲ ವಾದ ಮಳಿಗೆಯಾಗಿರುವುದರಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ವ್ಯವಹಾರ ನಡೆಸಲು ಕೂಡಾ ಸಹಕಾರಿಯಾಗಲಿದೆ ಎಂದು ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ,ಉಪಾಧ್ಯಕ್ಷ ದಯಾನಂದ ಕುರುಂಜಿ, ಮತ್ತು ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್ ತಿಳಿಸಿದ್ದಾರೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.