ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಎ.29 ರಿಂದ ಪುನರ್ಮನನ ತರಬೇತಿ

Advt_Headding_Middle
Advt_Headding_Middle

 

ಚಂದನ ವಾಹಿನಿಯಲ್ಲಿ ಪ್ರಸಾರ : ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಣೆ

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮುಂದೂಡಿಕೆಯಾಗಿರುವುದರಿಂದ ಪರೀಕ್ಷೆ ಬರೆಯಲು ಆತಂಕದಿಂದ ಕಾಯುತ್ತಿರುವ ಮಕ್ಕಳಿಗೆ ದೂರದರ್ಶನದ ಚಂದನ ವಾಹಿನಿಯಲ್ಲಿ ಎ. 29ರಿಂದ ಪುನರ್ಮನನ (Revision) ತರಗತಿಗಳನ್ನು ಆರಂಭಿಸಲಾಗುತ್ತಿದೆ.

ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫೇಸ್ ಬುಕ್ ನಲ್ಲಿ ಇದನ್ನು ಪ್ರಕಟಿಸಿದ್ದಾರೆ.

ಈ ತರಗತಿಗಳು ಎ. 29ರಿಂದ ಪ್ರತಿ ದಿನ ಮಧ್ಯಾಹ್ನ 3ರಿಂದ 4.30ರವರೆಗೆ ನಡೆಯಲಿದ್ದು, ನುರಿತ ಶಿಕ್ಷಕರು ವಿಷಯವಾರು ಬೋಧನೆ ಮಾಡಲಿದ್ದಾರೆ.

ಮೊದಲ 16 ದಿನ ಪ್ರತಿ 45 ನಿಮಿಷಗಳ ಎರಡು ಅವಧಿಗಳಲ್ಲಿ ಗಣಿತ ಹಾಗೂ ವಿಜ್ಞಾನ ವಿಷಯಗಳ ಬೋಧನಾ ತರಗತಿಗಳು ನಡೆಯಲಿದ್ದು, 17ನೇ ದಿನ ಈ ಎರಡೂ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ವಿಧಾನವನ್ನು ಶಿಕ್ಷಕರು ತಿಳಿಸಿಕೊಡಲಿದ್ದಾರೆ.

18ನೇ ದಿನದಿಂದ ಸಮಾಜ ವಿಜ್ಞಾನದ ತರಗತಿಗಳು 6 ದಿನಗಳ ಅವಧಿಗೆ ನಡೆಯಲಿದ್ದು,ನಂತರದ ದಿನಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷಾ ವಿಷಯಗಳ ಬೋಧನೆಯನ್ನೂ ಸಹ ಮಾಡಲಾಗುತ್ತದೆ.

ಪ್ರತಿ ವಿಷಯ ಬೋಧನೆಯ ಕೊನೆಯಲ್ಲಿ ವಿಶೇಷವಾಗಿ ತಯಾರಿಸಲಾಗಿರುವ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನವನ್ನು ಹೇಳಿಕೊಡಲಾಗುತ್ತದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.