Breaking News

ಅಡ್ಕಾರು: ಅಂಜನಾದ್ರಿ ದೇವಾಲಯದ ವತಿಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Advt_Headding_Middle
Advt_Headding_Middle

ಜಾಲ್ಸೂರು ಗ್ರಾಮದ ಅಡ್ಕಾರು ಅಂಜನಾದ್ರಿಯ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದ ವತಿಯಿಂದ ಅಡ್ಕಾರು ಪರಿಸರದ ಸುಮಾರು ಎಪ್ಪತ್ತು ಕಡು ಬಡವರ ಮನೆಗಳಿಗೆ ಆಹಾರ ಸಾಮಾಗ್ರಿಗಳ ಕಿಟನ್ನು ಎ.19ರಂದು ವಿತರಿಸಲಾಯಿತು.
ಕೋವಿಡ್-19 ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರವು ಭಾರತ ಲಾಕ್ ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಕಡುಬಡವರಿಗೆ ಜೀವನ ನಡೆಸಲು ಕಷ್ಟಕರವಾಗಿದ್ದು, ಈ ಹಿನ್ನೆಲೆಯಲ್ಲಿ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದ ಸಮಿತಿಯವರ ವತಿಯಿಂದ ಧನಸಹಾಯ ಸಂಗ್ರಹ ಮಾಡಿ ಸುಮಾರು 70 ಸ್ಥಳೀಯ ಬಡವರ ಮನೆಗಳಿಗೆ ತಲಾ 5 ಕೆಜಿ ಕುಚ್ಚಲು ಅಕ್ಕಿ, ಒಂದು ಕೆಜಿ ಸಕ್ಕರೆ ಸೇರಿದಂತೆ ಆಹಾರ ಸಾಮಾಗ್ರಿಗಳ ಕಿಟ್ ತಯಾರಿಸಿ, ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಆಡಳಿತ ಸಮಿತಿ, ಸೇವಾ ಸಮಿತಿ, ಮಹಿಳಾ ಸಮಿತಿ, ಭಜನಾ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.