ಅರಂತೋಡು: ಟಾಸ್ಕ್ ಫೋರ್ಸ್ ಸಮಿತಿಗಳ ಜಂಟಿ ಸಭೆ

Advt_Headding_Middle
Advt_Headding_Middle

 

ಅರಂತೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಂತೋಡು ಮತ್ತು ತೊಡಿಕಾನ ಗ್ರಾಮಗಳ ಕೋ ವಿಡ್ 19( ಕೋರೋನ )ಟಾಸ್ಕ್ ಫೋರ್ಸ್ ಸಮಿತಿಗಳ ಜಂಟಿ ಸಭೆಯನ್ನು ಗ್ರಾಮ ಪಂಚಾಯಿತಿನಲ್ಲಿ ನಡೆಸಲಾಯಿತು.ಸದರಿ ಸಭೆಯು ಗ್ರಾಪಂ ಅಧ್ಯಕ್ಷರಾದ ಲೀಲಾವತಿ ಕೊಡಂಕಿರಿ ಅವರ ನೇತೃತ್ವದಲ್ಲಿ ನಡೆಯಿತು .ಸಭೆಯಲ್ಲಿ ಕೋರೋಣ ಬಗ್ಗೆ ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೇಷನ್ ಸಿಗದ ಕುಟುಂಬಗಳಿಗೆ ರೇಷನ್ ವಿತರಣೆ ಕುರಿತು ಚರ್ಚಿಸಲಾಯಿತು ಗ್ರಾಮಪಂಚಾಯ್ತಿಯಲ್ಲಿ ಜನರು ಸರಿಯಾದ ರೀತಿಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೆ ಇರುವುದರಿಂದ ಕ್ರಮ ವಹಿಸುವ ಕುರಿತು ಚರ್ಚಿಸಲಾಯಿತು. ಮತ್ತು ತಳಹಂತದಲ್ಲಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಕಾರ್ಯಕರ್ತೆಯರು ಅಭಿನಂದಿಸಲಾಯಿತು. ತಳಹಂತದಲ್ಲಿ ಜನರೊಂದಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ತಮ್ಮ ತಾವು ತೊಡಗಿಸಿಕೊಂಡ ಆಶಾ ಕಾರ್ಯಕರ್ತೆಯರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಸಕರು,ಗ್ರಾಮ ಪಂಚಾಯತ್ ಮತ್ತು ಕೃಷಿ ಪತ್ತಿನ ಸಹಕಾರಿ ಸಂಘ ಅರಂತೋಡು ನೀಡಿರುವ ಕಿಟ್ ಗಳನ್ನು ವಿತರಿಸಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷರಾದ ಶಿವಾನಂದ ಕುಕ್ಕುಂಬಳ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಪುಷ್ಪಾ ಮೇದಪ್ಪ, ಸುಳ್ಯ ಎಪಿಎಂಸಿ ಅಧ್ಯಕ್ಷರಾದ ದೀಪಕ್ ಕುತ್ತಮೊಟ್ಟೆ, ಅರಂತೋಡು ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ವೈದ್ಯಾಧಿಕಾರಿಗಳಾದ ಡಾ ಮಿಥುನ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಗ್ರಾಪಂ ಸದಸ್ಯರು ಮತ್ತು ಟಾಸ್ಕ್ ಫೋರ್ಸ್ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.