HomePage_Banner
HomePage_Banner
HomePage_Banner
HomePage_Banner

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪದಗ್ರಹಣ ಕಾರ್ಯಕ್ರಮ ಮುಂದೂಡಿಕೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಸಮಾರಂಭ ಜೂ.07ರಂದು ನಿಗದಿಪಡಿಸಲಾಗಿತ್ತು.

ಲಾಕ್‌ಡೌನ್ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಧಿಸಿರುವ ಕೆಲವು ನಿರ್ಬಂಧಗಳ ಹಿನ್ನಲೆಯಲ್ಲಿ ಮುಂದೂಡಲಾಗಿದೆ ಎಂದು ಕೆಪಿಸಿಸಿ ಪ್ರಕಟಣೆ ತಿಳಿಸಿದೆ.
ಅಧ್ಯಕ್ಷರ ಪದಗ್ರಹಣ ಪೂರ್ವಭಾವಿ ತಯಾರಿ, ಟಿ.ವಿ. ಸೆಟ್‌ಗಳ ಅಳವಡಿಕೆ,

advertisement 

ಸಾಮಾಜಿಕ ಜಾಲತಾಣದ ವ್ಯವಸ್ಥೆ, ಕಂಪ್ಯೂಟರ್ ಜತೆ ಇಂಟರ್‌ನೆಟ್ ವ್ಯವಸ್ಥೆ ಮುಂತಾದ ಎಲ್ಲಾ ಸಿದ್ಧತೆಗಳು ಎಲ್ಲಾ ಕಡೆಯೂ ನಡೆಯುತ್ತಿದ್ದು, ಅದನ್ನು ಮುಂದುವರೆಸಿಕೊಂಡು ಮುಂದೆ ನಿಗದಿಯಾಗಲಿರುವ ದಿನಾಂಕಕ್ಕೆ ಅನುಗುಣವಾಗಿ ಸಜ್ಜುಗೊಳಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜೂ.೦೮ರ ಲಾಕ್‌ಡೌನ್ ಸಡಿಲಿಕೆಯ ಬಳಿಕ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.