HomePage_Banner
HomePage_Banner
HomePage_Banner
HomePage_Banner

ವಿಶ್ವ ಪರಿಸರ ದಿನಾಚರಣೆ : ಸುಳ್ಯ ನ್ಯಾಯಾಲಯದ ಆವರಣದಲ್ಲಿ ಗಿಡ ನೆಡುವ ಮೂಲಕ ಚಾಲನೆ

 


ಕಾನೂನು ತಾಲೂಕು ಸೇವೆಗಳ ಸಮಿತಿ, ವಕೀಲರ ಸಂಘ ಸುಳ್ಯ, ಅರಣ್ಯ ಇಲಾಖೆ ಸುಳ್ಯ ಇದರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ನ್ಯಾಯಾಲಯದ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಸುಳ್ಯ ನ್ಯಾಯಾಲಯದ ನ್ಯಾಯಾಧೀಶರುಗಳಾದ ಪುರುಷೋತ್ತಮ ಹಾಗೂ ಯಶ್ವಂತ್ ಕುಮಾರ್ ಕೆ ಗಿಡ ನೆಡುವ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಸುಳ್ಯ ರೇಂಜರ್ ಮಂಜುನಾಥ್, ಎ.ಪಿ.ಪಿ. ಜನಾರ್ದನ್, ವಕೀಲರ ಸಂಘದ ಪದಾಧಿಕಾರಿಗಳಾದ ವಿನಯ ಕುಮಾರ್ ಮುಳುಗಾಡು, ಗಾಂಬೀರ್, ಶ್ರೀಹರಿ ಕುಕ್ಕುಡೇಲು, ಹರೀಶ್ ಬೂಡುಪನ್ನೆ, ನ್ಯಾಯಾಲಯದ ಸಿಬ್ಬಂದಿಗಳು, ಅರಣ್ಯ ಇಲಾಖೆ ಸಿಬ್ಬಂದಿಗಳು ಇದ್ದರು.

ನ್ಯಾಯಾಲಯದ ಆವರಣದಲ್ಲಿ ಗಿಡಗಳನ್ನು ನೆಟ್ಟ ಬಳಿಕ, ಗಿಡಗಳ ವಿತರಣೆಯು ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.