ಕನಕಮಜಲು: ಪ್ರಾ.ಕೃ.ಪ.ಸ.ಸಂಘದ ವತಿಯಿಂದ ರೈತರಿಗೆ ತರಕಾರಿ ಬೀಜ ವಿತರಣೆ

Advt_Headding_Middle
Advt_Headding_Middle

 ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಜಾಲ್ಸೂರು ಮತ್ತು ಗ್ರಾಮ ವಿಕಾಸ ಸಮಿತಿ ಕನಕಮಜಲು – ಜಾಲ್ಸೂರು ಇದರ ಜಂಟಿ ಆಶ್ರಯದಲ್ಲಿ ಗ್ರಾಮದ ರೈತರಿಗೆ ತರಕಾರಿ ಬೀಜಗಳ ವಿತರಣಾ ಕಾರ್ಯಕ್ರಮವು ಸಂಘದ ಕನಕ ಸೌಧ ಸಭಾಭವನದಲ್ಲಿ ಜೂ.10ರಂದು ಬೆಳಿಗ್ಗೆ ಜರುಗಿತು.


ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಅವರು ತರಕಾರಿ ಬೀಜ ವಿತರಣೆಯ ಕುರಿತು ರೈತರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ, ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಗ್ರಾ.ಪಂ. ಉಪಾಧ್ಯಕ್ಷ ಶ್ರೀಧರ ಕುತ್ಯಾಳ, ಯುವಕ ಮಂಡಲದ ಅಧ್ಯಕ್ಷ ಜಯಪ್ರಸಾದ್ ಕಾರಿಂಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಗ್ರಾಮದ ರೈತರು ತರಕಾರಿ ಬಿತ್ತನೆ ಬೀಜಗಳನ್ನು ಪಡೆದುಕೊಂಡರು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.