ಕನಕಮಜಲು ಯುವಕ ಮಂಡಲದ ವಾರ್ಷಿಕ ಮಹಾಸಭೆ

Advt_Headding_Middle
Advt_Headding_Middle

ನೂತನ ಪದಾಧಿಕಾರಿಗಳ ಪದಗ್ರಹಣ
ಯುವಜನ ವಿಕಾಸ ಕೇಂದ್ರ ಯುವಕ ಮಂಡಲ ರಿ. ಕನಕಮಜಲು ಇದರ ವಾರ್ಷಿಕ ಮಹಾಸಭೆ ಮತ್ತು ಪದಗ್ರಹಣ ಸಮಾರಂಭವು ಕನಕಮಜಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂ.14ರಂದು ನಡೆಯಿತು.


ಕಾರ್ಯಕ್ರಮದಲ್ಲಿ ಯುವಕ ಮಂಡಲದ ಅಧ್ಯಕ್ಷ ಜಯಪ್ರಸಾದ್ ಕಾರಿಂಜ ಅದ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಡಾ| ಗೋಪಾಲಕೃಷ್ಣ ಭಟ್ ಕಾಟೂರು, ಯುವಜನ ಸಂಯುಕ್ತ ಮಂಡಳಿ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಎ. ಎಂ., ಕನಕಮಜಲು ಗ್ರಾ.ಪಂ. ಉಪಾಧ್ಯಕ್ಷ ಶ್ರೀಧರ ಕುತ್ಯಳ, ಯುವಕ ಮಂಡಲದ ಗೌರವಾಧ್ಯಕ್ಷ ಹರಿಪ್ರಸಾದ್ ಮಾಣಿಕೊಡಿ ಕಾರ್ಯದರ್ಶಿ ಬಾಲಚಂದ್ರ ನೆಡಿಲು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯುವಕ ಮಂಡಲದ ಎಲ್ಲಾ ಪೂರ್ವಾಧ್ಯಕ್ಷರುಗಳು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಹರಿಪ್ರಸಾದ್ ಮಾಣಿಕೊಡಿ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಜಯಪ್ರಸಾದ್ ಕಾರಿಂಜ ಪುನರಾಯ್ಕೆಗೊಂಡರು. ಉಪಾಧ್ಯಕ್ಷರಾಗಿ ರಕ್ಷಿತ್ ಅಕ್ಕಿಮಲೆ, ಪ್ರ.ಕಾರ್ಯದರ್ಶಿಯಾಗಿ ಬಾಲಚಂದ್ರ ನೆಡಿಲು, ಜೊತೆ ಕಾರ್ಯದರ್ಶಿಯಾಗಿ ಹರ್ಷಿತ್ ಉಗ್ಗಮೂಲೆ, ಕ್ರೀಡಾ ಕಾರ್ಯದರ್ಶಿಯಾಗಿ ಚಂದ್ರಶೇಖರ ನೆಡಿಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅಶ್ವಥ್ ಅಡ್ಕಾರ್, ಖಜಾಂಜಿಯಾಗಿ ಸಂದೀಪ್ ಉಗ್ಗಮೂಲೆ, ಪತ್ರಿಕಾ ಪ್ರತಿನಿಧಿಯಾಗಿ ಜಯದೀಪ್ ಕುದ್ಕುಳಿ, ಪರಿಸರ ಮತ್ತು ಸಂರಕ್ಷಣೆ ಕಾರ್ಯದರ್ಶಿಯಾಗಿ ವಿಶ್ವನಾಥ ಮಾಣಿಕೊಡಿ, ನಿರ್ದೇಶಕರುಗಳಾಗಿ ಚೇತನ್ ನೆಡಿಲು, ಪುಷ್ಪರಾಜ್ ಪಲ್ಲತ್ತಡ್ಕ, ಜ್ಞಾನೇಶ್ ಕುದ್ಕುಳಿ, ಕೀರ್ತಿ ಕನ್ನಡ್ಕ, ಪ್ರಸನ್ನ ಮಾಣಿಕೊಡಿ, ಜಗದೀಶ್ ಮಾಣಿಕೊಡಿ, ಸುಬ್ರಹ್ಮಣ್ಯ ಮಾಣಿಕೊಡಿ, ಜಗನ್ನಾಥ ಬಿ ಹೆಚ್ ಮಾಣಿಮಜಲು, ದಿನೇಶ್ ಮಠ ಆಯ್ಕೆಯಾದರು.
ಚಂದ್ರಶೇಖರ ನೆಡಿಲು ಸ್ವಾಗತಿಸಿ, ಬಾಲಚಂದ್ರ ನೆಡಿಲು ವಂದಿಸಿದರು. ಅಶ್ವಥ್ ಅಡ್ಕಾರ್ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.