ದಕ್ಷಿಣ ಕನ್ನಡದಲ್ಲಿ ಇಂದು ಐವರಿಗೆ ಕೊರೋನಾ

Advt_Headding_Middle
Advt_Headding_Middle

 

*ಕಡಬ ಬಳಿಯ ವ್ಯಕ್ತಿಗೂ ಕೊರೋನಾ ಪಾಸಿಟಿವ್*

*ರಾಜ್ಯದಲ್ಲಿ ಇಂದು 176 ಮಂದಿಗೆ ಸೋಂಕು*

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 5 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇವರಲ್ಲಿ ಮೂವರು ಸೌದಿಯಿಂದ ಬಂದವರಾಗಿದ್ದರೆ, ಒಬ್ಬರು ಮಹಾರಾಷ್ಟ್ರದಿಂದ ಬಂದವರು. ಇನ್ನೊಬ್ಬರಿಗೆ ಸ್ಥಳೀಯ ಸಂಪರ್ಕದಿಂದ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 276ಕ್ಕೇರಿದೆ.

ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಭಾನುವಾರ 26 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.
ಇವರು ಮುಂಬಯಿನಿಂದ ಆಗಮಿಸಿದ್ದು, ಜಿಲ್ಲಾಡಳಿತ ಕ್ವಾರಂಟೈನ್‌ನಲ್ಲಿದ್ದರು. ಜೂ.12ರ ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟ ಬಳಿಕ ಇವರ ಗಂಟಲ ದ್ರವ ಮಾದರಿ ತಪಾಸಣೆಗೆ ಕಳುಹಿಸಲಾಗಿದ್ದು, ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 21 ಪ್ರಕರಣಗಳು ವರದಿಯಾಗಿವೆ. ಇವರಲ್ಲಿ 20 ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಒಬ್ಬರ ಸಂಪರ್ಕ ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1026 ಕ್ಕೇರಿದೆ.

ಕರ್ನಾಟಕ ರಾಜ್ಯದಲ್ಲಿ ಇಂದು 176 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರಲ್ಲಿ 88 ಮಂದಿ ಅಂತಾರಾಜ್ಯ/ ರಾಷ್ಟ್ರದಿಂದ ಬಂದವರು. ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 7000ಕ್ಕೇರಿದೆ. ಇಂದು 5 ಮಂದಿ ಮೃತಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 86ಕ್ಕೆ ಏರಿದೆ.

*ಕೇರಳ* ದಲ್ಲಿ ಭಾನುವಾರ 54 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿದೆ. ಸೋಂಕಿತರ ಸಂಖ್ಯೆ 2461ಕ್ಕೇರಿದ್ದು, 19 ಮಂದಿ ಮೃತಪಟ್ಟಿದ್ದಾರೆ.
ಕಾಸರಗೋಡಿನಲ್ಲಿ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 366ಕ್ಕೇರಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.