ದುಗಲಡ್ಕದಲ್ಲಿ ಅಕ್ರಮ ಗೋ ಸಾಗಾಟಗಾರರಿಗೆ ಹಲ್ಲೆ ಪ್ರಕರಣ: ಸ್ಥಳಕ್ಕೆ ಡಿವೈಎಸ್ಪಿ ಭೇಟಿ

Advt_Headding_Middle
Advt_Headding_Middle

ಸುಳ್ಯದ ನಾವೂರು ಎಂಬಲ್ಲಿಂದ ಜೂನ್ 15ರಂದು ಸಂಜೆ ಅಕ್ರಮವಾಗಿ ದನ ಸಾಗಿಸುತ್ತಿದ್ದವರನ್ನು ದುಗಲಡ್ಕಸಮೀಪ ಯುವಕರು ತಡೆದು ಪಿಕಪ್ ವಾಹನದಲ್ಲಿದ್ದ ಮೂವರನ್ನು ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ಮಂದಿಯ ಮೇಲೆ ಕೇಸು ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಸುಳ್ಯಕ್ಕೆ ಭೇಟಿ ನೀಡಿದ ಡಿವೈಎಸ್ಪಿ ದಿನಕರ ಶೆಟ್ಟಿ ಇಂದು ಬೆಳಿಗ್ಗೆ ದುಗಲಡ್ಕಹಾಗೂ ಜಟ್ಟಿಪಳ್ಳ ದ ಪರಿಸರಕ್ಕೆ ಭೇಟಿ ನೀಡಿ
ಘಟನೆಗೆ ಸಂಬಂಧಿಸಿದಂತೆ ಪೂರ್ಣ ಮಾಹಿತಿ ಪಡೆದಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸುಳ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.