Breaking News

ವುಮೆನ್ ಇಂಡಿಯಾ ಮೂವ್ ಮೆಂಟ್ ( WIM ) ಸುಳ್ಯ ವತಿಯಿಂದ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಕೋರಿ ಮನವಿ

Advt_Headding_Middle
Advt_Headding_Middle

 

 ಕೋವಿಡ್ – 19 ಕೊರೋನ ವೈರಸ್ ಲಾಕ್ ಡೌನ್ ನಿಂದಾಗಿ ಜನ ಸಾಮಾನ್ಯರು ಕೆಲಸವಿಲ್ಲದೇ ಒಂದೊತ್ತಿನ ಊಟಕ್ಕೂ ಕಷ್ಟ ಪಡುತ್ತಿರುವ ಸಂಧರ್ಭ ವಾಗಿದೆ ಪ್ರಸಕ್ತ ಸನ್ನಿವೇಶ. ಇಂತಹ ಸಂಕಷ್ಟದ ಸಮಯದಲ್ಲಿ ಲಾಕ್ ಡೌನ್ ಸಮಯದ ಎರಡು ತಿಂಗಳ ವಿದ್ಯುತ್ ಬಿಲ್ಲನ್ನು ಪಾವತಿ ಮಾಡಬೇಕೆಂದು ಜನ ಸಾಮಾನ್ಯರ ಮೇಲೆ ಒತ್ತಡ ಹೇರುತ್ತಿರುವುದು ಉತ್ತಮ ಬೆಳವಣಿಗೆಯಲ್ಲ ಎಂಬುದನ್ನು ಮನಗಾಣಬೇಕಾಗಿದೆ.


ಹಾಗಾಗಿ ಇಂತಹ ಕ್ಲಿಷ್ಟಕರ ಸನ್ನಿವೇಶದಲ್ಲಿ ಜನ ಸಾಮಾನ್ಯರೊಂದಿಗೆ ಸರ್ಕಾರ ಕರುಣೆ ತೋರಿ ಲಾಕ್ ಡೌನ್ ಸಂಧರ್ಭದಲ್ಲಿನ ಎರಡು ತಿಂಗಳ ವಿದ್ಯುತ್ ಬಿಲ್ಲನ್ನು ಮನ್ನಾ ಮಾಡಬೇಕೆಂದು ವುಮೆನ್ ಇಂಡಿಯಾ ಮೂವ್ ಮೆಂಟ್ ( WIM ) ವತಿಯಿಂದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸುಳ್ಯ ಇವರ ಮೂಲಕ ಕರ್ನಾಟಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ವಿಮ್ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಹಾಗೂ ವಿಮ್ ಸುಳ್ಯ ವಿಧಾನಸಭಾ ಸಮಿತಿ ಸದಸ್ಯರಾದ ನಸೀಮ ಪೆರಾಜೆ , ಸಾಜಿದಾ ಪೈಚಾರ್ ಹಾಜರಿದ್ದರು..

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.