ಗ್ರಾಮ ಪಂಚಾಯತ್‌ಗೆ ಆಡಳಿತಾಧಿಕಾರಿಗಳ ನೇಮಕ

Advt_Headding_Middle
Advt_Headding_Middle

ಯಾವ ಪಂಚಾಯತ್‌ಗೆ ಯಾರು ಆಡಳಿತಾಧಿಕಾರಿ?

ಇಲ್ಲಿದೆ ಫುಲ್ ಡಿಟೇಲ್ಸ್


ಅವಧಿ ಮುಕ್ತಾಯಗೊಂಡಿರುವ ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕಾತಿ ಮಾಡುವ ಕುರಿತು ಸರಕಾರ ಮಾಡಿರುವ ಆದೇಶದ ಹಿನ್ನಲೆಯಲ್ಲಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಿಗೂ ಆಡಳಿತಾಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ದೇವಚಳ್ಳ, ನೆಲ್ಲೂರು ಕೆಮ್ರಾಜೆ ಮತ್ತು ಐವರ್ನಾಡು ಪಂಚಾಯತ್‌ಗಳ ಆಡಳಿತಾಧಿಕಾರಿ ಆಗಿ ಸಿಡಿಪಿಒ ಶ್ರೀಮತಿ ರಶ್ಮಿ ಕೆ.ಎಂ., ಉಬರಡ್ಕ ಮಿತ್ತೂರು, ಅಮರಮುಡ್ನೂರು ಮತ್ತು ಮರ್ಕಂಜ ಪಂಚಾಯತ್‌ಗಳ ಆಡಳಿತಾಧಿಕಾರಿಯಾಗಿ ಸಹಾಯಕ ತೋಟಗಾರಿಕಾ ನಿರ್ದೇಶಕಿ ಶ್ರೀಮತಿ ಸುಹಾನ ಪಿ.ಕೆ.ಯವರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಪೆರುವಾಜೆ, ಬೆಳ್ಳಾರೆ ಹಾಗೂ ಕಲ್ಮಡ್ಕಗಳಿಗೆ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಹನುಮಂತರಾಯಪ್ಪ, ಕೊಲ್ಲಮೊಗ್ರು, ಮಡಪ್ಪಾಡಿ, ಮುರುಳ್ಯ ಗ್ರಾಮ ಪಂಚಾಯತ್‌ಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸುರೇಶ್ ಅವರನ್ನು ನೇಮಿಸಲಾಗಿದೆ.
ಪಂಜ ಗ್ರಾಮ ಪಂಚಾಯತ್‌ಗೆ ಜಾನುವಾರು ಅಭಿವೃದ್ಧಿ ಅಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು ಆಡಳಿತಾಧಿಕಾರಿಯಾಗಿದ್ದಾರೆ. ಬಾಳಿಲ ಹಾಗೂ ಕೊಡಿಯಾಲ ಗ್ರಾಮ ಪಂಚಾಯತ್‌ಗಳಿಗೆ ಎಪಿಎಂಸಿ ಕಾರ್ಯದರ್ಶಿ ನಿರಂಜನ್ ಚಿದಾನಂದ ಹಿರೇಮಠ್, ಸಂಪಾಜೆ ಮತ್ತು ಅರಂತೋಡು ಗ್ರಾಮ ಪಂಚಾಯತ್‌ಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹಾದೇವ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಕನಕಮಜಲು ಮತ್ತು ಜಾಲ್ಸೂರು ಪಂಚಾಯತ್ ಆಡಳಿತಾಧಿಕಾರಿಯಾಗಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶ್ರೀಮತಿ ವೀಣಾ ಎಂ..ಟಿ., ಅಜ್ಜಾವರ ಮತ್ತು ಮಂಡೆಕೋಲು ಪಂಚಾಯತ್‌ಗಳ ಆಡಳಿತಾಧಿಕಾರಿಯಾಗಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ ರೈ ಆಡಳಿತಾಧಿಕಾರಿಯಾಗಲಿದ್ದಾರೆ.
ಗುತ್ತಿಗಾರು ಮತ್ತು ಹರಿಹರ ಪಲ್ಲತ್ತಡ್ಕ ಪಂಚಾಯತ್‌ಗಳ ಆಡಳಿತಾಧಿಕಾರಿಯಾಗಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಚಂದ್ರಶೇಖರ ಪೇರಾಲು, ಆಲೆಟ್ಟಿ ಮತ್ತು ಕಳಂಜ ಪಂಚಾಯತ್‌ಗಳ ಆಡಳಿತಾಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಣ್ಣೇಗೌಡ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಎಡಮಂಗಲ, ಬಳ್ಪ, ಸುಬ್ರಹ್ಮಣ್ಯ, ಶಿರಾಡಿ ಪಂಚಾಯತ್‌ಗಳ ಆಡಳಿತಾಧಿಕಾರಿಯಾಗಿ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ದಾಮೋದರ ಪಿ. ಆಡಳಿತಾಧಿಕಾರಿಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.