Breaking News

ವಿನೋಬಾನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಎಂ.ಆರ್.ಪಿ.ಎಲ್. ಕೊಡುಗೆಯಿಂದ ನಿರ್ಮಾಣಗೊಳ್ಳುತ್ತಿರುವ ಶಾಲಾ ನೂತನ ಕಟ್ಟಡದ ಭೂಮಿ ಪೂಜೆ

Advt_Headding_Middle
Advt_Headding_Middle


ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಎಂ.ಆರ್.ಪಿ.ಎಲ್. ಕೊಡುಗೆಯಿಂದ ಸಂಸದರ ಹಾಗೂ ಶಾಸಕರ ಮುತುವರ್ಜಿಯಿಂದ ಸುಮಾರು 90 ಲಕ್ಷ ಅನುದಾನದಿಂದ ನಿರ್ಮಾಣಗೊಳ್ಳುತ್ತಿರುವ ಎರಡು ಮಹಡಿಯ ಶಾಲಾ ನೂತನ ಕಟ್ಟಡದ ಭೂಮಿಪೂಜೆಯು ಜೂ.26ರಂದು ಬೆಳಿಗ್ಗೆ ಜರುಗಿತು.


ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕ ಎಸ್. ಅಂಗಾರ ಎಂ.ಆರ್.ಪಿ.ಎಲ್. ಜನರಲ್ ಮ್ಯಾನೇಜರ್ ಸುಬ್ರಹ್ಮಣ್ಯ ಭಟ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ನ. ಸೀತಾರಾಮ, ಶಾಲಾ ಸ್ಥಾಪಕಾಧ್ಯಕ್ಷ ಕೆ. ಉಪೇಂದ್ರ ಕಾಮತ್, ಶಾಲಾ ಸಂಚಾಲಕ ಕೆ. ಸುಧಾಕರ ಕಾಮತ್ ವಿನೋಬಾನಗರ, ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ, ಜಿ.ಪಂ. ಸದಸ್ಯರುಗಳಾದ ಶ್ರೀಮತಿ ಪುಷ್ಪಾವತಿ ಬಾಳಿಲ, ಹರೀಶ್ ಕಂಜಿಪಿಲಿ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಕಲಾ ಎಸ್. ನಾಯಕ್, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಶಾಲಾ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.