ಜಿಲ್ಲೆಯಲ್ಲಿ 33 ಕೊರೋನಾ ಪಾಸಿಟಿವ್

Advt_Headding_Middle
Advt_Headding_Middle

 

*ಕರ್ನಾಟಕದಲ್ಲಿ 445 ಮಂದಿಗೆ ಕೊರೋನಾ*

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 33 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಸೋಂಕಿತರಲ್ಲಿ 15 ಮಂದಿ ಗಲ್ಫ್ ರಾಷ್ಟ್ರಗಳಾದ ಸೌದಿ, ಕತಾರ್, ದಮಾಮ್ ನಿಂದ ಬಂದವರು. 6 ಮಂದಿಗೆ ಉಸಿರಾಟ ಸಮಸ್ಯೆಯಿಂದ ಸೋಂಕು ಪತ್ತೆಯಾಗಿದೆ. ಇಬ್ಬರಿಗೆ ಸೋಂಕು ಹರಡಿರುವುದರ ಮೂಲ ಪತ್ತೆಯಾಗಲಿಲ್ಲ. ಜಿಲ್ಲೆಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 527ಕ್ಕೇರಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 9 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಎಲ್ಲರೂ ಹೊರ ಪ್ರದೇಶದಿಂದ ಬಂದವರು. ಈ ಮೂಲಕ ಉಡುಪಿಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1125ಕ್ಕೆ ಏರಿದೆ.

ಕರ್ನಾಟಕ ರಾಜ್ಯದಲ್ಲಿ ಇಂದು 445 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 11005 ಕ್ಕೇರಿದೆ. ಇಂದು 10 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ರಾಜ್ಯದಲ್ಲಿ ಒಟ್ಟು 180 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕೇರಳ ದಲ್ಲಿ ಇಂದು 150 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿದ್ದು, ಕಾಸರಗೋಡು ಜಿಲ್ಲೆಯಲ್ಲಿ 2 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.