ಜುಲೈ ಐದರಿಂದ ಪ್ರತಿ ಆದಿತ್ಯವಾರ ಲಾಕ್ ಡೌನ್

Advt_Headding_Middle
Advt_Headding_Middle

 

ನಾಳೆಯಿಂದ ಮತ್ತೆ ರಾತ್ರಿ ಕರ್ಫ್ಯೂ ಜಾರಿ

ಸರಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಕೆಲಸ

ಜುಲೈ ಐದರಿಂದ ಪ್ರತಿ ಆದಿತ್ಯವಾರ ಲಾಕ್ ಡೌನ್ ಸೇರಿದಂತೆ ಹಲವು ನಿರ್ಧಾರಗಳನ್ನು ಸರಕಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ.

ಸಚಿವ ಆರ್. ಅಶೋಕ್ ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲಿದ್ದು ರಾತ್ರಿ ಎಂಟರಿಂದ ಬೆಳಿಗ್ಗೆ ಐದರವರೆಗೆ ಕರ್ಫ್ಯೂ ಜಾರಿಗೊಳಿಸಲಾಗುವುದು.

ಸರಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಕೆಲಸ. ಪ್ರತಿ ಶನಿವಾರ ಕಚೇರಿಗಳಿಗೆ ರಜೆ ಘೋಷಿಸಲಾಗುವುದು ಎಂದೂ ಸರಕಾರ ನಿರ್ಧರಿಸಿದ್ದು, ನಾಳೆ ಮುಖ್ಯಮಂತ್ರಿಗಳು ಅಧಿಕೃತವಾಗಿ ಈ ವಿಚಾರಗಳನ್ನು ಪ್ರಕಟಿಸಲಿರುವುದಾಗಿ ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.