HomePage_Banner
HomePage_Banner
HomePage_Banner
HomePage_Banner

ಹರಿಹರಪಲ್ಲತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ನಿವೃತ್ತ ಆರೋಗ್ಯ ಸಹಾಯಕಿ ಶ್ರೀಮತಿ ವೇದಾವತಿ ಯವರಿಗೆ ಬೀಳ್ಕೊಡುಗೆ, ಸನ್ಮಾನ ಕಾರ್ಯಕ್ರಮ

 

ಹರಿಹರಪಲ್ಲತ್ತಡ್ಕ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ 34 ವರ್ಷಗಳಿಂದ ಆರೋಗ್ಯ ಸಹಾಯಕಿಯಾಗಿ ಸೇವೆಯನ್ನು ನಿರ್ವಹಿಸಿ ಜೂ. 30 ರಂದು ವಯೋ ನಿವೃತ್ತಿ ಹೊಂದಲಿರುವ ಶ್ರೀಮತಿ ವೇದಾವತಿರವರನ್ನು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ,ಮಕ್ಕಳ ಪೋಷಕರು, ಆಶಾ ಕಾರ್ಯಕರ್ತೇಯವರು, ಮಹಿಳಾ ಮಂಡಲದ ಅಧ್ಯಕ್ಷರು, ಸದಸ್ಯರು, ಸ್ತ್ರೀ ಶಕ್ತಿ ಸದಸ್ಯರ ನೇತೃತ್ವದಲ್ಲಿ ಜೂ.29 ಹರಿಹರಪಲ್ಲತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ, ಗೌರವಿಸಿ ಬೀಳ್ಕೊಡಲಾಯಿತು.


ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಿಮ್ಮತ್ ಕೆ. ಸಿ. ರವರು ವಹಿಸಿದರು. ಮುಖ್ಯ ಅತಿಥಿಗಳಾಗಿ ಡಾ|| ಚಂದ್ರಶೇಖರ ಕಿರಿಭಾಗ, ಮಹಿಳಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಲಲಿತಾಜ ಮಲ್ಲಾರ, ಮುಖ್ಯ ಶಿಕ್ಷಕರಾದ ಶೇಷಪ್ಪ ಗೌಡ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ರಾಜೀವಿ ಮತ್ತು ಶ್ರೀಮತಿ ಬಿಂದು, ಶಿಕ್ಷಕ ವೃಂದ ಹಾಗೂ ಮಕ್ಕಳ ಪೋಷಕರು , ಅಂಗನವಾಡಿ ಸಹಾಯಕಿ,ಶ್ರೀಮತಿ ಪವಿತ್ರ ಪುಟಾಣಿಗಳು, ಆಶಾ ಕಾರ್ಯಕರ್ತೆ ಶ್ರೀಮತಿ ಪುಷ್ಪಾವತಿ, ಶ್ರೀಮತಿ ಶೋಭಾ ಉಪಸ್ಥಿತರಿದ್ದರು.

ಶ್ರೀಮತಿ ಹೊನ್ನಮ್ಮ ಪ್ರಾರ್ಥಿಸಿದರು. ಅಂಗನವಾಡಿ ಕಾರ್ಯಕರ್ತೆಯಾದ ಶ್ರೀಮತಿ ಹರಿಣಿ ಸ್ವಾಗತಿಸಿದರು. ಶ್ರೀಮತಿ ಚಂದ್ರಿಕಾರವರು ವಂದಿಸಿದರು. ಶ್ರೀಮತಿ ತಾರಮತಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.