ಸುಳ್ಯದಲ್ಲಿ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ

Advt_Headding_Middle
Advt_Headding_Middle
Advt_Headding_Middle

 

ನಾಡಹಬ್ಬಗಳ ಆಚರಣಾ ಸಮಿತಿ ಸುಳ್ಯ ತಾಲೂಕು, ಗೌಡರ ಯುವ ಸೇವಾ ಸಂಘ ಸುಳ್ಯ, ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಸಹಯೋಗದಲ್ಲಿ ನಾಡಪ್ರಭು ಕೆಂಪೇಗೌಡ ರ ಜನ್ಮ ದಿನಾಚರಣೆ ಜೂ.30 ರಂದು ಸುಳ್ಯ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಭೋಜಪ್ಪ ಗೌಡ ಸಭಾಂಗಣದಲ್ಲಿ ನಡೆಯಿತು.

ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ ಅಧ್ಯಕ್ಷತೆಯನ್ನು ವಹಿಸಿದ್ದರು.


ಸುಳ್ಯ ನಾಡಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು, ಸುಳ್ಯ ತಹಶೀಲ್ದಾರ್ ಅನಂತಶಂಕರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ್ ಭಾಗವಹಿಸಿದ್ದರು.


ಶಿಕ್ಷಕಿ ಶ್ರೀಮತಿ ಚಂದ್ರಮತಿ‌ ಉಪನ್ಯಾಸ ನೀಡಿದರು.

ಗೌಡರ ಯುವ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು ವೇದಿಕೆಯಲ್ಲಿದ್ದರು. ಎಂ.ಜಿ.ಎಂ. ಶಾಲಾ ಸಂಚಾಲಕ ಪಿ.ಎಸ್.ಗಂಗಾಧರ್ ಸ್ವಾಗತಿಸಿದರು.
ಸಂಘದ ನಿಕಟಪೂರ್ವ ಅಧ್ಯಕ್ಷ ದಿನೇಶ್ ಮಡಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗೌಡ ಸಂಘದ ಎಸ್.ಆರ್.ಸೂರಯ್ಯ, ಎ.ವಿ.ತೀರ್ಥರಾಮ, ಸದಾನಂದ ಮಾವಜಿ, ರಾಕೇಶ್ ಕುಂಟಿಕಾನ, ವೀರಪ್ಪ ಗೌಡ ಕಣ್ಕಲ್, ಶ್ರೀಮತಿ ಲತಾ ಎಸ್. ಮಾವಜಿ, ಶ್ರೀಮತಿ ಲತಾ ಕುದ್ಪಾಜೆ, ದಿನೇಶ್ ಮಡ್ತಿಲ, ಐ.ಬಿ.ಚಂದ್ರಶೇಖರ, ಐ.ಕೆ.ಹೇಮಚಂದ್ರ, ಸೊಸೈಟಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಕೆ.ಟಿ. ವಿಶ್ವನಾಥ್, ಚಂದ್ರಶೇಖರ ಮೇರ್ಕಜೆ, ಕುಸುಮಾಧರ್, ಮನೋಜ್ ಪಾನತ್ತಿಲ ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.