Breaking News

ಗೂನಡ್ಕ ಮಾರುತಿ ಸ್ಕೂಲ್‌ಗೆ ಕಡಬ ಸರಸ್ವತಿ ವಿದ್ಯಾಲಯದ ಆಡಳಿತ ಮಂಡಳಿ ಭೇಟಿ

Advt_Headding_Middle
Advt_Headding_Middle

ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್‌ಗೆ ಕಡಬ ಸರಸ್ವತಿ ವಿದ್ಯಾಲಯದ ಆಡಳಿತ ಮಂಡಳಿಯವರ ಭೇಟಿ ಕಾರ್ಯಕ್ರಮ ೩೦ ರಂದು ನಡೆಯಿತು.


ವಿಜ್ಞಾನ ಹಾಗೂ ಗಣಿತ ಪ್ರಯೋಗಾಲಯದ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯದ ಆಡಳಿತ ಮಂಡಳಿಯವರು ಹಾಗೂ ಬೋಧಕ ಸಿಬ್ಬಂದಿ ವರ್ಗದವರು ಶಾಲಾ ಕಟ್ಟಡದ ವ್ಯವಸ್ಥೆ, ಸ್ವಚ್ಛತೆ ಹಾಗೂ ವಿಜ್ಞಾನ ಪ್ರಯೋಗಾಲಯವನ್ನು ವೀಕ್ಷಿಸಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯದ ಸಂಚಾಲಕರಾದ ಶ್ರೀ ವೆಂಕಟರಮಣ ರಾವ್ ಮಾಂಕುಡೆ, ಅಧ್ಯಕ್ಷರಾದ ರವಿರಾಜ್ ಶೆಟ್ಟಿ, ಸದಸ್ಯರಾದ ಶ್ರೀಮತಿ ಸವಿತಾಶಿವ ಸುಬ್ರಹ್ಮಣ್ಯ ಭಟ್, ಜಿ.ಪಿ.ಟಿ ಬಂಟ್ವಾಳದ ಉಪನ್ಯಾಸಕರಾದ ಸನತ್ ರಾಮ್, ಧನಪಾಲ ಗೂನಡ್ಕ, ಸರಸ್ವತಿ ವಿದ್ಯಾಲಯದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶೈಲಶ್ರೀ ಹಾಗೂ ಸಿಬ್ಬಂದಿ ವರ್ಗ, ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನ ಅಧ್ಯಕ್ಷರಾದ ರುಕ್ಮಯ್ಯ ದಾಸ್, ಕಾರ್ಯದರ್ಶಿ ಕಿಶೋರ್ ಕುಮಾರ್, ಪ್ರಾಂಶುಪಾಲೆ ಶ್ರೀಮತಿ ಶೋಭಾ ಕಿಶೋರ್, ಉಪಪ್ರಾಂಶುಪಾಲೆ ಶ್ರೀಮತಿ ಪುನೀತ ಹಾಗೂ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.