ಜು.5 ರಿಂದ ಆ.2ರ ತನಕದ ಭಾನುವಾರಗಳಂದು ಸಂಪೂರ್ಣ ಲಾಕ್‌ಡೌನ್ | ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಸ್ಥಗಿತ

Advt_Headding_Middle
Advt_Headding_Middle
Advt_Headding_Middle

ಕೋವಿಡ್ -19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಕುರಿತು ಸರಕಾರ ಹೊಸ ಮಾರ್ಗಸೂಚಿಗಳನ್ನು ಸೇರ್ಪಡೆಗೊಳಿಸುವ ಮೂಲಕ ಜು.5 ಭಾನುವಾರ ಸೇರಿದಂತೆ ಮುಂದಿನ ಆ.2ರ ತನಕದ ಭಾನುವಾರಗಳಂದು ಸಂಪೂರ್ಣ ಲಾಕ್‌ಡೌನ್ ಇರಲಿದೆ ಎಂದು ರಾಜ್ಯ ಸರಕಾರದ ಸಚಿವಾಲಯದಿಂದ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಪ್ರಕಟಣೆ ಹೊರಡಿಸಿದೆ.

Advertisement 

ರಾಜ್ಯದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಪರಿಸ್ಥಿತಿಯನ್ನು ಪರಾಮರ್ಶಿಸಿ ಸರಕಾರವು ಈ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ತೆಗೆದು ಕೊಳ್ಳುವ ಸಂಬಂಧವಾಗಿ ಹಾಲಿ ಚಾಲ್ತಿಯಲ್ಲಿರುವ ಮುಂಜಾಗ್ರತಾ ಕ್ರಮಗಳ ಜೊತೆಗೆ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯವಶ್ಯವೆಂದು ನಿರ್ಧರಿಸಿದೆ. ಅದರಂತೆ ಸರಕಾರ ಹೆಚ್ಚುವರಿ ಮಾರ್ಗಸೂಚಿಗಳನ್ನು ಸೇರ್ಪಡೆಗೊಳಿಸಿದ್ದು, ಜು.5ರಿಂದ ಆ.2ರ ತನಕದ  ಪೂರ್ಣ ದಿನದ ಲಾಕ್ ಡೌನ್ ಇರತಕ್ಕದು, ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧವಿಲ್ಲ. ಜೊತೆಗೆ ಮೆಡಿಕಲ್, ಹಾಲು ಅಗತ್ಯ ವಸ್ತುಗಳಿಗೆ ಲಾಕ್‌ಡೌನ್ ಸಡಿಲಿಕೆ ಇದೆ ಎಂದು ಮಾಹಿತಿ ಲಭ್ಯವಾಗಿದೆ.

ಶನಿವಾರಗಳು ಕಚೇರಿಗಳು ಮುಚ್ಚಲ್ಪಡುತ್ತವೆ:
ರಾಜ್ಯ ಸರಕಾರದ ಎಲ್ಲಾ ಇಲಾಖೆಗಳು, ಕಚೇರಿಗಳು, ಬೋರ್ಡ್‌ಗಳು ಮತ್ತು ಕಾರ್ಪೋರೇಷನ್ನುಗಳು (ತುರ್ತು ಮತ್ತು ಅಗತ್ಯ ಸೇವೆಗಳನ್ನು ಒದಗಿಸುವಂತಹ ಇಲಾಖೆಗಳು, ಕಚೇರಿಗಳು, ಬೋರ್ಡ್‌ಗಳು ಮತ್ತು ಕಾರ್ಪೋರೇಷನ್ನುಗಳನ್ನು ಹೊರತುಪಡಿಸಿ) ಈಗಿರುವ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ 10 ರಿಂದ ಎಲ್ಲಾ ಶನಿವಾರಗಳಂದು ಆ.8ರ ತನಕ ಮುಚ್ಚಲ್ಪಡುತ್ತವೆ.

ರಾತ್ರಿ ಗಂಟೆ 8ರಿಂದ ಬೆಳಿಗ್ಗೆ 5ರ ತನಕ ಕರ್ಫ್ಯೂ ಜಾರಿ 
ರಾಜ್ಯಾದ್ಯಂತ ರಾತ್ರಿ ಗಂಟೆ 8 ರಿಂದ ಬೆಳಿಗ್ಗೆ ಗಂಟೆ 5 ರ ತನಕ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ಕರ್ಫ್ಯೂ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

Advertisement 

ಭಾನುವಾರ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಸ್ಥಗಿತ:
ಜು.5ರ ಭಾನುವಾರದಂದು ಪೂರ್ಣ ಲಾಕ್‌ಡೌನ್‌ಗೆ ಸಂಬಂಧಿಸಿ ಅಂದು ಬೆಳಗ್ಗಿನಿಂದ ಜು.6ರ ಬೆಳಗ್ಗಿನ ತನಕ ಕೆ.ಎಸ್.ಆರ್.ಟಿ.ಸಿ ಬಸ್‌ಗಳು ಕಾರ್ಯಾಚರಿಸುವುದಿಲ್ಲ ಎಂದು ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ನಾಗೇಂದ್ರ ಅವರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.