ವಿನೋಬಾನಗರ: ವಿವೇಕಾನಂದ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಎನ್. ಗೋಪಾಲರಾವ್ ನಿವೃತ್ತಿ

Advt_Headding_Middle
Advt_Headding_Middle
Advt_Headding_Middle

 

ನೂತನ ಮುಖ್ಯೋಪಾಧ್ಯಾಯರಾಗಿ ಗಿರೀಶ್ ಕೆ. ಅವರು ನೇಮಕ

ವಿದ್ಯಾಸಂಸ್ಥೆಯ ನೂತನ ಆಡಳಿತಾಧಿಕಾರಿಯಾಗಿ ಗೋಪಾಲರಾವ್ ನೇಮಕ

ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಯ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾಗಿದ್ದ ಎನ್. ಗೋಪಾಲರಾವ್ ಅವರು ನಿವೃತ್ತಿಯಾಗಿದ್ದು, ವಿದ್ಯಾಸಂಸ್ಥೆಯ ನೂತನ ಆಡಳಿತಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

 


ಪ್ರೌಢಶಾಲಾ ಮುಖ್ಯೋಪಾಧ್ಯಾಯರಾಗಿ ಕಡಬ ತಾಲೂಕಿನ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ರಸಾಯನಶಾಸ್ತ್ರ ಉಪನ್ಯಾಸಕರಾಗಿದ್ದ ಗಿರೀಶ್ ಕುಮಾರ್ ಎ. ಆವರು ನೇಮಕಗೊಂಡಿದ್ದಾರೆ.


ಎನ್. ಗೋಪಾಲರಾವ್ ಅವರು ಸುಮಾರು ಏಳು ವರ್ಷಗಳ ಕಾಲ ವಿದ್ಯಾಸಂಸ್ಥೆಯಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದು, ಇದೀಗ ಆರೋಗ್ಯದ ಹಿತದೃಷ್ಟಿಯಿಂದ ಮುಖ್ಯೋಪಾಧ್ಯಾಯ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರು ಗೋಪಾಲರಾವ್ ಅವರನ್ನು ವಿದ್ಯಾಸಂಸ್ಥೆಯ ನೂತನ ಆಡಳಿತಾಧಿಕಾರಿಯಾಗಿ ನೇಮಕಗೊಳಿಸಿದೆ.
ಪ್ರೌಢಶಾಲಾ ಮುಖ್ಯೋಪಾಧ್ಯಾಯರಾಗಿ ನೂತನವಾಗಿ ನೇಮಕಗೊಂಡಿರುವ ಗಿರೀಶ್ ಕೆ. ಅವರು ಬೆಂಗಳೂರಿನ ಚೆನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ಮೂರು ವರ್ಷ ಶಿಕ್ಷಕರಾಗಿ, ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಆರು ವರ್ಷ, ಕಡಬ ತಾಲೂಕಿನ ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಾಲ್ಕು ವರ್ಷಗಳ ಕಾಲ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ನಿವೃತ್ತಿಯಾಗಿರುವ ಎನ್. ಗೋಪಾಲರಾವ್ ಅವರು ಮಂಡ್ಯದ ಮಹದೇಶ್ವರ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ ವೃತ್ತಿ ಆರಂಭಿಸಿ ಮೂರು ವರ್ಷ, ಬಳಿಕ ಉಡುಪಿಯ ಬುಡ್ನಾರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕರಾಗಿ ಐದು ವರ್ಷ, 1980ರಿಂದ 1993ರವರೆಗೆ ಪೇರಾಲು ಹಿ.ಪ್ರಾ.ಶಾಲೆ ಸಹಶಿಕ್ಷಕರಾಗಿ, 1993ರಿಂದ 1998ರವರೆಗೆ ಜಟ್ಟಿಪಳ್ಳ ಸ.ಹಿ.ಪ್ರಾ.ಶಾಲೆಯಲ್ಲಿ ಸಹಶಿಕ್ಷಕರಾಗಿ, 1998ರಿಂದ 2006ರವರೆಗೆ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಂದಿ ಶಿಕ್ಷಕರಾಗಿ ಸೇವೆ ಸಲ್ಲಿಸಿ, ಸುಮಾರು 34 ವರ್ಷಗಳ ಶಿಕ್ಷಕವೃತ್ತಿಯಿಂದ ನಿವೃತ್ತಿಗೊಂಡಿದ್ದರು.


2007ರಿಂದ 2012ರವರೆಗೆ ಪುತ್ತೂರಿನ ಕಾವು ಬುಶ್ರಾ ವಿದ್ಯಾಸಂಸ್ಥೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ, 2012ರಿಂದ 2020ರವರೆಗೆ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ, ಇದೀಗ ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಮುಖ್ಯೋಪಾಧ್ಯಾಯ ಹುದ್ದೆಗೆ ರಾಜೀನಾಮೆ ನೀಡಿದ್ದು, ಸಂಸ್ಥೆಯ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.


ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಸಂಚಾಲಕ ಕೆ. ಸುಧಾಕರ ಕಾಮತ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ನ.ಸೀತಾರಾಮ, ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪಾವನ, ಹಾಗೂ ವಿದ್ಯಾಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.