ಲಾಕ್‌ಡೌನ್ ಹಿನ್ನಲೆಯಲ್ಲಿ ಶಾಸಕರ ನೇತೃತ್ವದಲ್ಲಿ ಸಮಾಲೋಚನೆ

Advt_Headding_Middle
Advt_Headding_Middle

ಕ್ಷೇತ್ರದ ಜನತೆ ಪೂರ್ಣ ಸಹಕಾರ ನೀಡಲು ಎಸ್. ಅಂಗಾರ ಮನವಿ

ಕಾನೂನು ಮೀರಿದರೆ ಕಠಿಣ ಕ್ರಮ ವಹಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ

ಕೊರೋನಾ ನಿಯಂತ್ರಿಸುವ ಸಲುವಾಗಿ ಬುಧವಾರ ರಾತ್ರಿ ೮ ಗಂಟೆಯಿಂದ ಮುಂದಿನ ಗುರುವಾರ ರಾತ್ರಿಯವರೆಗೆ 1 ವಾರದ ಕಾಲ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಲಾಕ್‌ಡೌನ್ ಹಿನ್ನಲೆಯಲ್ಲಿ ಸುಳ್ಯ ಶಾಸಕ ಎಸ್.ಅಂಗಾರ ಅವರು ತಾಲೂಕಿನ ಉನ್ನತ ಅಧಿಕಾರಿಗಳೊಂದಿಗೆ ಜು. 13ರಂದು ಸಂಜೆ ಸಮಾಲೋಚನೆ ನಡೆಸಿದರು.

 

ಲಾಕ್‌ಡೌನ್ ನಿಯಮಗಳನ್ನು ಪಾಲಿಸಿ ಕೊರೋನಾ ನಿಯಂತ್ರಣದ ನಿಟ್ಟಿನಲ್ಲಿ ಸರಕಾರ ಕೈಗೊಂಡಿರುವ ಮಾರ್ಗಸೂಚಿಗಳಿಗೆ ಜನ ಸಹಕಾರ ನೀಡುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ನಾಳೆಯಿಂದಲೇ ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಧ್ವನಿವರ್ಧಕದ ಮೂಲಕ ಜನರಲ್ಲಿ ಕೊರೋನಾ ಲಾಕ್‌ಡೌನ್ ಜಾಗೃತಿ ಮೂಡಿಸಬೇಕು, ಜನರಿಗೆ ದಿನಬಳಕೆಯ ಅಗತ್ಯ ವಸ್ತುಗಳ ಖರೀದಿಸಲು ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಪ್ರತೀ ಪಂಚಾಯತ್ ಅಧಿಕಾರಿಗಳು ಈ ಕುರಿತು ನಿಗಾ ವಹಿಸುವಂತೆ ಸೂಚಿಸಬೇಕು ಎಂದು ಇ.ಒ.ಅವರಿಗೆ ಶಾಸಕರು ತಿಳಿಸಿದರು.
ಒಂದು ವಾರಗಳ ಕಾಲ ಇರುವ ಲಾಕ್‌ಡೌನ್ ಸಂದರ್ಭ ಸರಕಾರ ನಾಳೆ ಮಾರ್ಗಸೂಚಿಯನ್ನು ಪ್ರಕಟಿಸಲಿದ್ದು ಕಾನೂನು ಮೀರಿದರೆ ಅಂತವರ ಮೇಲೆ ಕಠಿಣ ಕ್ರಮ ವಹಿಸುವಂತೆ ಪೊಲೀಸ್ ಇಲಾಖೆಗೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಅನಂತಶಂಕರ, ಸರ್ಕಲ್ ಇನ್ಸ್‌ಪೆಕ್ಟರ್ ನವೀನ್‌ಚಂದ್ರ ಜೋಗಿ, ನ.ಪಂ. ಮುಖ್ಯಾಧಿಕಾರಿ ಮತ್ತಡಿ, ತಾಲೂಕು ಆರೋಗ್ಯಾಧಿಕಾರಿ ಡಾ. ಸುಬ್ರಹ್ಮಣ್ಯ, ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ನ.ಪಂ. ಸದಸ್ಯ ವಿನಯ ಕಂದಡ್ಕ, ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ ಸೇರಿದಂತೆ ತಾ.ಪಂ. ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.