Breaking News

ಪೆರುವಾಜೆ : ಕುಂಡಡ್ಕ ಸ್ವಾಮಿ ಕೊರಗಜ್ಜ ದೈವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ, ಗಿಡ ವಿತರಣೆ ಕಾರ್ಯಕ್ರಮ

Advt_Headding_Middle
Advt_Headding_Middle

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್  ಬೆಳ್ಳಾರೆ ವಲಯದ ಪೆರುವಾಜೆ ಗ್ರಾಮದ ಕುಂಡಡ್ಕ ಸ್ವಾಮಿ ಕೊರಗಜ್ಜ ದೈವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ವಿತರಣೆ ಕಾರ್ಯಕ್ರಮ ನಡೆಸಲಾಯಿತು. 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ  ಸಂತೋಷ್ ಕುಮಾರ್ ರೈ ಆಗಮಿಸಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಮಾಹಿತಿಯನ್ನು ನೀಡಿದರು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಕ್ಕೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಕುಂಬ್ರ ದಯಾಕರ ಆಳ್ವ ಅವರು ವಹಿಸಿದ್ದರು. ಗ್ರಾಮದ ಪ್ರಮುಖರಾದ ಕುಶಾಲಪ್ಪ ಗೌಡ ಅಡ್ಯತಕಂಡ , ಮೇಲ್ವಿಚಾರಕರಾದ ಮುರಳಿಧರ ಎ , ಒಕ್ಕೂಟದ ಅಧ್ಯಕ್ಷರಾದ ಹೊನ್ನಪ್ಪ ಕೆ , ಸೇವಾಪ್ರತಿನಿಧಿ ಶ್ರೀಮತಿ ಯಶೋಧ ಸೇರಿದಂತೆ ಸುಮಾರು 60 ಮಂದಿ ಸದಸ್ಯರು ಭಾಗವಹಿಸಿದ್ದರು. ಸಾಂಕೇತಿಕವಾಗಿ ಆವರಣದಲ್ಲಿ ಗಿಡ ನಾಟಿ ಮಾಡಿ ಸದಸ್ಯರಿಗೆ ಗಿಡ ವಿತರಣೆ ಮಾಡಲಾಯಿತು .

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.